ಹುಳಿಯಾರು: ಗ್ರಾಮೀಣ ಪ್ರದೇಶದ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಸರಕಾರವು ಕೌಶಲ್ಯಾಭಿವೃದ್ದಿ ನಿಗಮವನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ಸಾಕಷ್ಟು ಸೌಲಭ್ಯವನ್ನು ಕಲ್ಪಿಸುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷ ಮುರಳಿಧರ್ ಹಾಲಪ್ಪ ತಿಳಿಸಿದರು.
ಹುಳಿಯಾರಿನ ಬಸವೇಶ್ವರ ಫೌಡ್ರಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ಅರಿವು ಕಾರ್ಯಗಾರ ಹಾಗೂ ೮ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಮ್ಮ ನಿಗಮದ ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ತರಬೇತಿ ಕೇಂದ್ರಗಳನ್ನು ತೆರೆದು ಶಿಕ್ಷಣಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರಗಳನ್ನು ನಡೆಸಲಾಗುತ್ತದೆ ಎಂದರು.
ಇಂದಿನ ವಿದ್ಯಾರ್ಥಿಗಳು ಕೇವಲ ಇಂಜೀನಿಯರಿಂಗ್ ಓದುವುದಕ್ಕೆ ಸೀಮಿತವಾಗದೆ ಐ.ಎ.ಎಸ್. ಹಾಗೂ ಐ.ಪಿ.ಎಸ್. ಶಿಕ್ಷಣವನ್ನು ಪಡೆದು ಸರಕಾರದ ಉನ್ನತ ಹುದ್ಧೆಗಳನ್ನು ಅಲಂಕರಿಸಿ ಉತ್ತಮ ಪ್ರಜೆಗಳಾಗುವಂತೆ ತಿಳಿಸಿದರು.
ವಿದ್ಯಾರ್ಥಿಗಳು ಓದಿನಲ್ಲಿ ನಿರ್ದಿಷ್ಟವಾದ ಮನಸ್ಸು, ಗುರಿಯನ್ನ ಹೊಂದಿ ಪ್ರಯತ್ನ ಪಟ್ಟರೆ ಯಾವುದು ಕಷ್ಟವಲ್ಲ, ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೆ ಕೊಟ್ಟ ಅನೇಕ ಮಹಾನ್ ವ್ಯಕ್ತಿಗಳನ್ನು ಆದರ್ಶವನ್ನಾಗಿ ಇಟ್ಟುಕೊಂಡು ವಿದ್ಯಾಭ್ಯಾಸ ನಡೆಸುವಂತೆ ತಿಳಿಸಿದರು.
ಜಿ.ಪಂ.ಸದಸ್ಯ ವೈ.ಸಿ.ಸಿದ್ಧರಾಮಯ್ಯ ಮಾತನಾಡಿ ಸಾಕಷ್ಟು ವರ್ಷಗಳ ಹಿಂದೆ ವಿದ್ಯಾರ್ಥಿಗಳಿಗೆ ಸೌಲಭ್ಯದ ಕೊರತೆಯಿಂದಾಗಿ ವಿದ್ಯಾಭಾಸಕ್ಕೆ ಅಡಚಣೆಯಾಗುತ್ತಿತ್ತು. ಇಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಸರಕಾರವು ಉಚಿತ ಸಮವಸ್ತ್ರ, ಪುಸ್ತಕ, ಸೈಕಲ್ ಸೇರಿದಂತೆ ಸಾಕಷ್ಟು ಯೋಜನೆಗಳನ್ನ ಜಾರಿಗೆ ತರುತ್ತಿದ್ದು ಇವುಗಳನ್ನು ಸಮಪರ್ಕವಾಗಿ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್, ಸದಸ್ಯರುಗಳಾದ ಬಿಂಧುರಮೇಶ್‌ಬಾಬು ಹಾಗೂ ವೆಂಕಟೇಶ್, ಕೆಂಕೆರೆ ಶಿವಕುಮಾರ್, ಬಸವೇಶ್ವರ ಫ್ರೌಡಶಾಲೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕಿರಣ್ ರಾಜ್, ಕನಕದಾಸ ಶಾಲೆಯ ಶಿಕ್ಷಕ ಜಗದೀಶ್ ಇತರರು ಹಾಜರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ