ವಿಷಯಕ್ಕೆ ಹೋಗಿ

ಹುಳಿಯಾರು:೨೮ ನೇ ದಿನದ ಧರಣಿಗೆ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಗ್ರಾಮಸ್ಥರ ಬೆಂಬಲ

ಲಾರಿಯಲ್ಲಿ ಊಟದ ಬುತ್ತಿ ಸಮೇತ ಹಾಜರಾದ ರೈತರು: ಸ್ವಾಮೀಜಿಗಳ ಸಾನಿಧ್ಯ

ಹುಳಿಯಾರು:ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ಕಳೆದ ೨೭ ದಿನಗಳಿಂದಲೂ ನಡೆಯುತ್ತಿರುವ ರೈತರ ಚಳುವಳಿ ಬಗ್ಗೆ ರಾಜ್ಯಸರ್ಕಾರದ ರೈತ ವಿರೋಧಿ ನಿಲುವು ಖಂಡಿಸಿ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಗ್ರಾಮಸ್ಥರು ಗುರುವಾರದಂದು ಹುಳಿಯಾರಿಗೆ ಲಾರಿಯಲ್ಲಿ ಬುತ್ತಿ ಸಮೇತ ಆಗಮಿಸಿ ರಾಂಗೋಪಾಲ್ ಮುಂಭಾಗ ರಸ್ತೆ ತಡೆ ನಡೆಸಿ ಧರಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಬೆಂಬಲ ಸೂಚಿಸಿದರು.
          ಹುಳಿಯಾರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಕೊಬ್ಬರಿ ಬೆಳಗಾರರ ೨೮ ನೇ ದಿನದ ಪ್ರತಿಭಟನೆಯಲ್ಲಿ ಅರಸಿಕೆರೆ ತಾಲ್ಲೂಕಿನ ಮಾಡಾಳು ನಿರಂಜನ ಪೀಠದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಪಾಲ್ಗೊಂಡ ಹಾಲ್ಕುರಿಕೆ ಗ್ರಾಮದ ನೂರಕ್ಕೂ ಹೆಚ್ಚು ಗ್ರಾಮಸ್ಥರು ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕೆಲ ಕಾಲ ರಸ್ತೆ ತಡೆ ನಡೆಸಿದರು.
          ನಂತರ ಮಾತನಾಡಿದ ಹರಿಸಮುದ್ರದ ನಾಗರಾಜ್ ಹಿಂದೊಂದು ಕಾಲದಲ್ಲಿ ಕಲ್ಪತರು ನಾಡಿನ ಕೊಬ್ಬರಿಗೆ ಬಂಗಾರದ ಬೆಲೆಯಿತ್ತು.ಇಂದು ಬಂಗಾರ ೩೦ ಸಾವಿರಕ್ಕೇರಿದರೆ ಕೊಬ್ಬರಿ ೬ ಸಾವಿರಕ್ಕಿಳಿದಿದೆ.ತೆಂಗು ಈ ಭಾಗದ ಜೀವನಾಧಾರವಾಗಿದ್ದು ಕಳೆದ ವರ್ಷ ೧೮ ಸಾವಿರವಿದ್ದ ಕೊಬ್ಬರಿ ಬೆಲೆ ದಿನೇ ದಿನೇ ಕುಸಿತ ಕಾಣುತ್ತಾ ಇಂದು ೬ ಸಾವಿರಕ್ಕಿಳಿದು ರೈತರನ್ನು ಸಾವಿನ ದವಡೆಗೆ ದೂಕಿದೆ.ನಮ್ಮ ಕೊಬ್ಬರಿಗೆ ಬೆಂಬಲ ಬೆಲೆ ಕೊಡಿ ಎಂದು ಸರ್ಕಾರವನ್ನು ಅಂಗಲಾಚುವ ಸ್ಥಿತಿ ಬಂದಿದೆ.ರೈತಪರ ಸರ್ಕಾರವೆಂದು ಅಧಿಕಾರಕ್ಕೆ ಬರುವ ಸರ್ಕಾರಗಳು ನಂತರ ರೈತರ ಬೆನ್ನಿಗೆ ನಿಲ್ಲುತ್ತಿಲ್ಲ ಎಂದರು.
           ಯಡಿಯೂರಪ್ಪನವರು ತಿಪಟೂರಿಗೆ ತೆಂಗು ಸಂಸ್ಕರಣ ಘಟಕವನ್ನು ಮಂಜೂರು ಮಾಡಿದ್ದನ್ನು ಮುಂದಿನ ಜನಪ್ರತಿನಿಧಿಗಳು ಯೋಜನೆಯ ಬಗ್ಗೆ ಪೂರಾ ನಿರ್ಲಕ್ಷ್ಯವಹಿಸಿದ್ದರಿಂದ ತೆಂಗಿನ ಉಪಉತ್ಪನ್ನಗಳ ಘಟಕ ಹಳ್ಳಹಿಡಿಯಿತು ಎಂದರು.

        ಸಾನಿಧ್ಯ ವಹಿಸಿದ್ದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸರ್ಕಾರವೂ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು.ದಿನೇದಿನೇ ಹೋರಾಟ ತೀವ್ರವಾಗುತ್ತಿದ್ದು ಮತ್ತಷ್ಟು ಪ್ರಬಲವಾಗುವುದನ್ನು ತಡೆಯಲು ರೈತರ ಬೇಡಿಕೆ ಈಡೇರಿಸಲು ಕೂಡಲೇ ಮುಂದಾಗಬೇಕು.ಅಸಂಬದ್ಧ ವಿಚಾರಗಳನ್ನು ದಿನಗಟ್ಟಲೇ ಬಿತ್ತರಮಾಡುವ ಮಾಧ್ಯಮದವರು ರೈತರ ಸಮಸ್ಯೆಗಳಿಗೆ ಕನ್ನಡಿಯಾಗಬೇಕೆಂದರು.
        ರಾಜ್ಯ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಮಾತನಾಡಿ ಇಂದಿಗೆ ಧರಣಿ ೨೮ ದಿನವಾಗಿದ್ದು ಕೂಗಳತೆ ದೂರದಲ್ಲಿರುವ ಶಾಸಕರು ಸೇರಿದಂತೆ ನಮ್ಮ ಜಿಲ್ಲೆಯಲ್ಲಿಯೆ ಕೊಬ್ಬರಿ ಬೆಳೆಯುವ ಸ್ಥಳದ ೧೦ ಜನ ಶಾಸಕರಿದ್ದು ಸಹ ಇತ್ತ ಯಾರೊಬ್ಬರೂ ಕೊಬ್ಬರಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.ಸಂಸದ ಮುದ್ಧಹನುಮೇಗೌಡರ ನೇತೃತ್ವದಲ್ಲಿ ಜಿಲ್ಲೆಯ ರೈತರುಗಳು ಜನವರಿಯಲ್ಲಿ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೊಬ್ಬರಿಗೆ ಕನಿಷ್ಠ ೧೫ ಸಾವಿರ ಬೆಲೆ ತೀರ್ಮಾನವಾಗುವವರೆಗೂ ಚಳುವಳಿ ಕೈಬಿಡುವ ಮಾತೇಯಿಲ್ಲ ಎಂದರು.

      ಜಿಲ್ಲಾಧ್ಯಕ್ಷ ಶಂಕರಪ್ಪ,ತಾಲ್ಲೂಕ್ ಉಪಾಧ್ಯಕ್ಷ ಮಲ್ಲೀಕಣ್ಣ,ಹಾಲ್ಕುರಿಕೆ ನಾಗರಾಜು ಮಾತನಾಡಿದರು.


      ಪ್ರತಿಭಟನೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಕುಮಾರಸ್ವಾಮಿ,ನಂಜುಂಡಪ್ಪ,ಹುಚ್ಚೀರೆ ಗೌಡರು,ಮಾಯಗೊಂಡನಹಳ್ಳಿ ರಾಮಣ್ಣ,ಹಾಲೇನಹಳ್ಳಿ ಸುರೇಶ್,ಮಲ್ಲಿಕಣ್ಣ,ನಾಗರಾಜು,ಪಟ್ರೆಹಳ್ಳಿ ಪುಟ್ಟಣ್ಣ,ಹಂಗಾಲಿ ಕುಮಾರಣ್ಣ,ಪರಮೇಶ್,ನಾಗಭೂಷಣ,ಷಡಾಕ್ಷರಿ ಮೊದಲಾದವರು ಪಾಲ್ಗೊಂಡಿದ್ದರು.
 -----------------------------------------------------------------
ಮೊಬೈಲ್ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ ಸಚಿವರನ್ನು ಕೈ ಬಿಡಿ ಎಂದು ಅಧಿವೇಶನದಲ್ಲಿ ಎಲ್ಲಾ ಪಕ್ಷದವರು ವಾರಗಟ್ಟಲೇ ಚರ್ಚಿಸಿ ಕಲಾಪ ಹಾಳುಗೆಡವಿದರೆ ವಿನಹ ಯಾರೊಬ್ಬರು ಅನ್ನದಾತ ರೈತನ ಬಗ್ಗೆ ಪ್ರಶ್ನೆಯೇ ಎತ್ತಲಿಲ್ಲ.ಅಧಿವೇಶನದಲ್ಲಿ ರೈತರ ಸಮಸ್ಯೆ ಆಲಿಸುವ ಬದಲು ರೈತರನ್ನು ಬಂಧಿಸಿದ್ದೆ ಇವರ ಸಾಧನೆ : ಹಾಲ್ಕುರಿಕೆ ನಾಗರಾಜು ,ಗ್ರಾಪಂ ಮಾಜಿ ಅಧ್ಯಕ್ಷ
-------------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...