ಹುಳಿಯಾರು:ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೊಳಿಸಿ ಮಾದರಿ ಗ್ರಾಮ ಪಂಚಾಯ್ತಿಗಳಾಗಿ ಅಭಿವೃದ್ಧಿ ಹೊಂದಲು ಹಾಗೂ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ನೀಡಲು ಸಹಕಾರಿಯಾಗುವಂತೆ ಮಾಡಲು ಲಂಚ ಮುಕ್ತ ಚಿಕ್ಕನಾಯಕನಹಳ್ಳಿ ವೇದಿಕೆ ಮುಂದಾಗಿದೆ.ಈ ಉದ್ದೇಶಕ್ಕಾಗಿ ಸಮಾನ ಮನಸ್ಕರ ತಾಲ್ಲೂಕ್ ಮಟ್ಟದ ಸಮಿತಿಯನ್ನೂ ರಚಿಸಲಾಗುವುದು.ಗ್ರಾಮ ಪಂಚಾಯ್ತಿಗಳಲ್ಲಿ ನಡೆಯುವ ಅಕ್ರಮಗಳನ್ನು ಕಾನೂನಿನಡಿಯಲ್ಲಿ ತಡೆಯುವ ಬಗ್ಗೆ ತರಬೇತಿ ಶಿಬಿರವನ್ನು ಡಿಸೆಂಬರ್ ತಿಂಗಳಿನಲ್ಲಿ ಆಯೋಜಿಸಲಾಗುವುದು. ಶಿಬಿರದಲ್ಲಿ ಸದಸ್ಯರುಗಳಿಗೆ ಹಾಗೂ ಆಸಕ್ತಿರಿಗೆ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕಾಗಿ ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಮತ್ತು ಸಕಾಲದಲ್ಲಿ ಪ್ರಶ್ನಿಸುವ ಕುರಿತಂತೆ ಸಂಪೂರ್ಣ ತರಬೇತಿ ನೀಡಲಾಗುವುದು. ತರಬೇತಿಗೆ ಹಾಗೂ ವೇದಿಕೆಗೆ ಸದಸ್ಯರಾಗುವ ಆಸಕ್ತರು ಭಟ್ಟರಹಳ್ಳಿ ಮಲ್ಲೀಕಾರ್ಜುನ್(9880665397)ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ