ಹುಳಿಯಾರು:ಪಟ್ಟಣದ ವಾಸವಿ ವಿದ್ಯಾಶಾಲೆಯಲ್ಲಿ ವಿದ್ಯಾರ್ಥಿಗಳು ಹೊಸವರ್ಷವನ್ನು ಸಂಭ್ರಮದಿಂದ ಆಚರಿಸಿದರು.
ಸಂಸ್ಥೆಯ ಅಧ್ಯಕ್ಷ ಲಕ್ಷ್ಮೀಕಾಂತ್ ಶೆಟ್ಟಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಮಕ್ಕಳಿಗೆ ವಿತರಿಸಿ ಮಾತನಾಡಿ ಮಕ್ಕಳ ಸರ್ವೋತ್ತಮುಖ ಅಭಿವೃದ್ಧಿಗಾಗಿ ಸಂಸ್ಥೆ ಶ್ರಮಿಸುತ್ತಿದ್ದು ಮಕ್ಕಳು ಶೈಕ್ಷಣಿಕವಾಗಿ ಮುಂದೆಬರಬೇಕೆಂದರು.
ಸಂಸ್ಥೆಯ ಕಾರ್ಯದರ್ಶಿ ರಾಮನಾಥ್ ಮಕ್ಕಳಿಗೆ ಶುಭಕೋರಿ ಮಾತನಾಡಿ ಹಿಂದಿನ ವರ್ಷದ ಕಹಿಯನ್ನೆಲ್ಲಾ ಮರೆತು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಶಾಲೆಗೆ ಉತ್ತಮ ಫಲಿತಾಂಶ ತನ್ನಿ ಎಂದು ಕರೆ ನೀಡಿದರು.
ಸಂಸ್ಥೆಯ ಸಹಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ಮಕ್ಕಳಿಗೆ ಹಿತನುಡಿಗಳಾಡಿದರು.ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಬಿ.ವಿ.ಶ್ರೀನಿವಾಸ್,ಅಜಯ್,ಶಿಲ್ಪಾಬಾಲಾಜಿ,ಆಶಾಬದರೀಶ್,ಟಿಆರ್ ಎಸ್ ಆರ್ ಶಾಲೆಯ ಮುಖ್ಯ ಶಿಕ್ಷಕ ರಮೇಶ್,ವಾಸವಿ ಶಾಲೆಯ ಮುಖ್ಯಶಿಕ್ಷಕ ಮಹೇಶ್ ,ಸುಧಾ ಮೊಸಲಾದವರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ