ವಿಷಯಕ್ಕೆ ಹೋಗಿ

ಹುಳಿಯಾರು ಸಮೀಪ ಬರದಲೇಪಾಳ್ಯದಲ್ಲಿ ಕಂಡುಬಂದ ಚಿರತೆ

ಕಾರ್ಯಚರಣೆಯಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ
---------------------------
ಹುಳಿಯಾರು: ಇಬ್ಬರನ್ನು ಗಾಯಗೊಳಿಸಿ ದಾಳಿಂಬೆ ತೋಟದಲ್ಲಿ ಅಡಗಿಕುಳಿತಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಕಡೆಗೂ ಸೆರೆಹಿಡಿದ ಘಟನೆ ಹುಳಿಯಾರು ಪೋಲಿಸ್ ಠಾಣಾ ವ್ಯಾಪ್ತಿಯ ಕೆಂಕೆರೆ ಮಜುರೆ ಬರದಲೇ ಪಾಳ್ಯದಲ್ಲಿ ಭಾನುವಾರ ಸಂಜೆ ನಡೆದಿದೆ.
         ಭಾನುವಾರ ಮುಂಜಾನೆ ೭.೩೦ರ ಸಮಯದಲ್ಲಿ ಕೆಂಕೆರೆ ಸಮೀಪದ ದುರ್ಗದಸೀಮೆ ಪಾಳ್ಯದಲ್ಲಿ ದಾಳಿಂಬೆ ತೋಟಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಚಿರತೆ ನಂತರ ೧೦.೩೦ರ ಸಮಯದಲ್ಲಿ ಬರದಲೇಪಾಳ್ಯದಲ್ಲಿ ಟೊಮೆಟೊ ಗಿಡಕ್ಕೆ ನೀರು ಹಾಯಿಸಲು ಹೋಗಿದ್ದ ವ್ಯಕ್ತಿಯ ಮೇಲೆ ಎರಗಿ ಗಾಯಗೊಳಿಸಿ ನಂತರ ಅಲ್ಲೆಯಿದ್ದ ದಾಳಿಂಬೆ ತೋಟಕ್ಕೆ ಹೊಕ್ಕಿದೆ.
         ಅಷ್ಟರಲ್ಲಾಗಲೇ ಚಿರತೆ ಸುದ್ದಿ ಎಲ್ಲಡೆ ಹಬ್ಬಿ ಅಪಾರ ಸಂಖ್ಯೆಯ ಜನ ಸೇರಿದ್ದರಿಂದ ಹಾಗೂ ಅರಣ್ಯ ಇಲಾಖೆಯವರು ಆಗಮಿಸಿ ಕಾರ್ಯಾಚರಣೆಗೆ ಇಳಿದಿದ್ದರಿಂದ ದಾಳಿಂಬೆ ತೋಟದಿಂದ ಹೊರಗೆ ಬರಲಾರದೆ ಗಾಬರಿಗೊಂಡು ಸಂಜೆಯವರೆಗೂ ಒಂದೇ ಸ್ಥಳದಲ್ಲಿ ಕುಳಿತಿದೆ.
ಚಿ           ರತೆ ಹಿಡಿಯಲು ಬಲೆ ಹೆಣೆದ ಅರಣ್ಯ ಇಲಾಖೆ ಸಿಬ್ಬಂದಿ ತೋಟದ ಸುತ್ತಲೂ ಬಲೆ ಹಾಕಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿತ್ತು.ಮಧ್ಯಾಹ್ನ ೨ ಗಂಟೆ ಸುಮಾರಿಗೆ ಹಾಸನದಿಂದ ಅರವಳಿಕೆ ತಜ್ಞರಾದ ಡಾ.ಮುರಳಿ ಆಗಮಿಸಿದ ನಂತರ ಕಾರ್ಯಚರಣೆಯನ್ನು ಆರಂಭಿಸಲಾಯಿತು.
         ಚಿರತೆಯು ದಾಳಿಂಬೆಗಿಡದ ಸಂದಿಯಲ್ಲಿ ಮಲಗಿದ್ದರಿಂದ ಅದರ ಚಲನವಲನ ಗಮನಿಸಿ ಅರಿವಳಿಕೆ ಚುಚ್ಚುಮದ್ದು ನೀಡಲು ಸಾಕಷ್ಟು ಸಮಯ ತೆಗೆದುಕೊಂಡಿತು.ಸಾವಿರದಷ್ಟು ಸೇರಿದ್ದ ಜನ ನಿಯಂತ್ರಿಸುವುದರ ಜೊತೆಗೆ ಚುಚುಮದ್ದು ನೀಡಿದಾಗ ಚಿರತೆ ಜನರ ಮೇಲೆ ಎರಗಿದರೆ ಎಂಬ ಆತಂಕದಲ್ಲಿಯೇ ಕಾರ್ಯಚರಣೆ ನಡೆಯಿತು.
            ಅಂತಿಮವಾಗಿ ಸಂಜೆ ೬ ಗಂಟೆ ಸುಮಾರಿಗೆ ಚಿರತೆಗೆ ಚುಚ್ಚುಮದ್ದು ನೀಡಿ ನಿತ್ರಾಣಗೊಂಡ ನಂತರ ಬಲೆಯಲ್ಲಿ ಹಾಕಿ ಬೋನಿನಲ್ಲಿ ಬಂಧಿಸಲಾಯಿತು.ಸೆರೆಹಿಡಿದ ಚಿರತೆಯನ್ನು ಸದ್ಯ ಬುಕ್ಕಾಪಟ್ಟಣಕ್ಕೆಕರೆದೊಯ್ದು ನಂತರ ಬಂಡಿಪುರ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ.
         ಕಾರ್ಯಾಚರಣೆಯಲ್ಲಿ ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಮಲ್ಲೀಕಾರ್ಜುನಯ್ಯ,ಉಪವಲಯ ಅರಣ್ಯಾಧಿಕಾರಿ ಬಸವರಾಜು,ಹುಳಿಯಾರು ಪಿಎಸೈ ಪ್ರವೀಣ್ ಕುಮಾರ್ ಸೇರಿದಂತೆ ಅರಣ್ಯ ಹಾಗೂ ಹುಳಿಯಾರು ಪೋಲಿಸ್ ಸಿಬ್ಬಂದಿವರ್ಗದವರು ಪಾಲ್ಗೊಂಡಿದ್ದರು.
----------
ದುರ್ಗದ ಸೀಮೆ ಪಾಳ್ಯದ ಗಿರಿಯಜ್ಜನ ಚನಬಸವಯ್ಯನ ಮಗ ಚನ್ನಬಸವಯ್ಯ ಎಂಬಾತ ಮುಂಜಾನೆ ದಾಳಿಂಬೆ ತೋಟಕ್ಕೆ ನೀರು ಕಟ್ಟಲು ಹೋದಾಗ ಅತನಿಗೆ ದಾಳಿಮಾಡಿದ ಚಿರತೆ ಆತನ ಭುಜ,ತಲೆ,ಕಾಲಿಗೆ ಗಾಯ ಮಾಡಿದ್ದು ಗಾಯಗೊಂಡಿದ್ದ ಆತನನ್ನು ತುಮಕೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ನಂತರ ಟೊಮ್ಯಾಟೊ ಗಿಡಕ್ಕೆ ನೀರು ಕಟ್ಟಲು ಹೋಗಿದ್ದ ಕೆಂಕೆರೆ ಶಿವಪ್ಪನವರ ಮಗ ಚನ್ನಬಸವಯ್ಯ ಎಂಬಾತನ ಮೇಲೆ ಎರಗಿಸ ಚಿರತೆ ಆತನ ಹೊಟ್ಟೆ ಭಾಗದಲ್ಲಿ ಗಾಯಗೊಳಿಸಿದ್ದು, ತೀವ್ರ ಗಾಯಗೊಂಡಿದ್ದ ಆತನನ್ನು ಬೆಂಗಳೂರಿನ ವಿಕ್ಟಿರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
-----------------------
ಹೊಸದುರ್ಗ ಅರಣ್ಯಪ್ರದೇಶದಿಂದ ಈ ಭಾಗಕ್ಕೆ ಕಾಡು ಪ್ರಾಣಿಗಳು ಬರುವುದು ಮಾಮೂಲಿಯಾಗಿದ್ದು ಕರಡಿ ಹಾವಳಿ ನಡೆದೆಯಿರುತ್ತದೆ.ಇದೇ ಮೊದಲ ಭಾರಿಗೆ ಚಿರತೆ ಆಗಮಿಸಿದ್ದು ಅರಣ್ಯಇಲಾಖೆ ಈ ಬಗ್ಗೆ ಗಮನ ಹರಿಸಬೇಕಿದೆ.:ದಯಾನಂದ,ಗ್ರಾಮಪಂಚಾಯ್ತಿ ಸದಸ್ಯ ,ಯಳನಾಡು

-------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...