ಹುಳಿಯಾರು:ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾ.23ರಂದು ನಡೆಯಲಿರುವ ಜೆಡಿಎಸ್ ಪಕ್ಷದ ಸ್ವಾಭಿಮಾನಿ, ಸಮಾನತೆ ಸಮಾವೇಶಕ್ಕೆ ತಾಲ್ಲೂಕಿನಿಂದ ೨ ಸಾವಿರಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಹುಳಿಯಾರು ಜೆಡಿಎಸ್ ಮುಖಂಡ ಹಾಗೂ ತಾಲ್ಲೂಕ್ ಪಂಚಾಯ್ತಿ ಸದಸ್ಯ ಹೆಚ್.ಎನ್.ಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಾದ ಜಯಪ್ರಕಾಶ ನಾರಾಯಣ ಭವನದ ಉದ್ಘಾಟನೆ ಹಾಗೂ ತದನಂತರ ಅರಮನೆ ಮೈದಾನದಲ್ಲಿ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಸಾರಥ್ಯದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಈ ಸಮಾವೇಶದಲ್ಲಿ ಪಕ್ಷದ ಸಂಘಟನೆಯ ಜೊತೆಗೆ, ರಾಜ್ಯ ಮತ್ತು ರಾಷ್ಟ್ರದ ಸಮಸ್ಯೆಯ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದಿದ್ದು ಇದಕ್ಕೆ ಕಾರ್ಯಕರ್ತರು ,ಶಾಸಕ ಸುರೇಶ್ ಬಾಬು ಅಭಿಮಾನಿಗಳು,ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆ.ಡಿ.ಎಸ್ ನ ತಾಲ್ಲೂಕ್ ಯುವ ಅಧ್ಯಕ್ಷ ಹೆಚ್ ಎನ್ ಗವಿರಂಗನಾಥ್ (ಗೌಡಿ) ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ