ಶಾಲೆಗಳಲ್ಲಿ ಕಲಿಕೆಯ ಜೊತೆಗೆ ಕೃಷಿ ಚಟುವಟಿಕೆಗೂ ಒತ್ತುನೀಡಬೇಕು.ಪಠ್ಯದ ಜೊತೆಜೊತೆಗೆ ಪಠ್ಯೇತರ ಚಟುವಟಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶಿಕ್ಷಕರುಗಳು ಶಾಲಾ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಕೈತೋಟ ಮಾಡಿದಲ್ಲಿ ತರಕಾರಿ ಬೆಳದಲ್ಲಿ ಬಿಸಿಯೂಟಕ್ಕು ಬಳಸಿಕೊಳ್ಳಬಹುದಾಗಿದೆ ಎಂದು ಕೆಂಕೆರೆ ಗ್ರಾಮಪಂಚಾಯ್ತಿ ಸದಸ್ಯ ಲೋಕೇಶ್ ಸಲಹೆ ನೀಡಿದರು. ಹುಳಿಯಾರು ಸಮೀಪದ ಕುರಿಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಶಾಲಾ ಕೈತೋಟದ ರಚನೆಗೆ ಗಿಡ ನೆಡುವ ಮೂಲಕ ಅವರು ಚಾಲನೆ ನೀಡಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಳಿಯಾರು ಮೇಲ್ವಿಚಾರಕ ಸಂತೋಷ್ ಮಾತನಾಡಿ ಇಲ್ಲಿ ಅಡುಗೆಗೆ ಬೇಕಾದ ಬಗೆಬಗೆಯ ತರಕಾರಿ ಬೆಳೆಯಲಾಗುತ್ತದೆ. ಕೈತೋಟದಿಂದ ಉತ್ತಮ ಪರಿಸರ ನಿರ್ಮಾಣವಾಗುತ್ತದಲ್ಲದೆ ಕೃಷಿ ಕಲಿಕೆಗೂ ಪ್ರೇರಣೆ ನೀಡಿದಂತಾಗುತ್ತದೆ ಎಂದರು. ಶಾಲೆಯ ಆವರಣದಲ್ಲಿ ಗಿಡ ನಾಟಿ ಮಾಡಲು ಸಂಸ್ಥೆಯ ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ಬಾಲಚಂದ್ರ,ಮುಖ್ಯ ಶಿಕ್ಷಕ ದೇವರಾಜು, ಸೇವಾ ಪ್ರತಿನಿಧಿಗಳಾದ ಗೌರಮ್ಮ,ಪುಷ್ಪಾವತಿ, ಒ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070