ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸುವ ಆದ್ಯಾತ್ಮಿಕ ವಿದ್ಯೆಯೇ ಯೋಗ
ಹುಳಿಯಾರು:ಆಧುನಿಕ ಜೀವನ ಶೈಲಿಯಿಂದಾಗಿ ಎದುರಾಗುತ್ತಿರುವ ಬಹುತೇಕ ಆರೋಗ್ಯದ ಸಮಸ್ಯೆಗಳಿಗೆ ಯೋಗ ಮದ್ದಾಗಿದ್ದು ಇದು ನಮ್ಮ ಭಾರತೀಯ ಸಂಸ್ಕೃತಿಯ ಹೆಮ್ಮೆಯ ಪ್ರತೀಕ ಎಂದು ಜಿಗಣಿಯ ವಿವೇಕಾನಂದ ಯೋಗ ಕೇಂದ್ರದ ಯೋಗಗುರು ರಾಮಲಿಂಗಂ ಹೇಳಿದರು.
ಪಟ್ಟಣದ ಶ್ರೀ ಮಾತಾ ಛಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ಧ್ಯಾನಮಂದಿರದಲ್ಲಿ ಉಚಿತ ಯೋಗಾಸನ ತರಬೇರತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯೋಗದ ಮಹತ್ವ ಹಾಗೂ ಸಮತೋಲನ ಆಹಾರದ ಪ್ರಾಮುಖ್ಯತೆ ಬಗ್ಗೆ ಮಾತನಾಡಿದ ಅವರು ನಾವು ಪ್ರತಿದಿನ ಸೇವಿಸುವ ಆಹಾರ ಹಾಗೂ ಜೀವನ ಕ್ರಮದಿಂದ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆ ಹೆಚ್ಚಾಗುತ್ತಿದ್ದು ಜನರ ಆರೋಗ್ಯ ಹದಗೆಡುವಂತಾಗಿದೆ. ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದ್ದು, ಆಸನಗಳಿಂದ ಜೀವನಕ್ರಮ ಸರಳವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಯೋಗ ಎಂದರೆ ಕೇವಲ ದೈಹಿಕ ಕಸರತ್ತಲ್ಲ.ಸರ್ಕಸ್ಸು ಅಲ್ಲ.ಅದೊಂದು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸುವ ಆಧ್ಯಾತ್ಮಿಕ ವಿದ್ಯೆ.ವಯಸ್ಸಿನ ಅಂತರವಿಲ್ಲದೆ ಪ್ರತಿಯೊಬ್ಬರೂ ಯೋಗ ಮಾಡಬಹುದಿದ್ದು ಯೋಗ ಮಾಡುವುದಕ್ಕೂ ಯೋಗ ಬೇಕು ಎಂದರು.
ಈ ಸಂದರ್ಭದಲ್ಲಿ ಶ್ರೀ ಮಾತಾ ಛಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗಂಗಾಧರ್,ಜಿಲ್ಲಾಪಂಚಾಯ್ತಿ ಸದಸ್ಯ ವೈ.ಸಿ.ಸಿದ್ಧರಾಮಯ್ಯ,ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ಎಂ.ಎಸ್.ನಟರಾಜು,ಹುಳಿಯಾರು ಗ್ರಾಮಪಂಚಾಯ್ತಿ ಉಪಾಧ್ಯಕ್ಷ ಗಣೇಶ್,ಗೂಬೇಹಳ್ಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ರಂಗನಾಥ್ ,ಉಮೇಶ್ ನಾಯಕ್,ಬನಶಂಕರಿ ದೇವಾಲಯದ ದಾಸಪ್ಪ ,ಅಭಾವಿಪ ನರೇಂದ್ರಬಾಬು ಮೊದಲಾದವರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ