ಹುಳಿಯಾರು:ಕೇಂದ್ರ ಸರ್ಕಾರ ವಿದ್ಯುತ್ ವಲಯವನ್ನು ಖಾಸಗಿಕರಣ ಮಾಡುತ್ತಿರುವುದನ್ನು ವಿರೋಧಿಸಿ ಸೋಮವಾರ ಹುಳಿಯಾರು ಪಟ್ಟಣದ ಬೆಸ್ಕಾಂ ನೌಕರರು ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪಟ್ಟಣದ ಬೆಸ್ಕಾಂ ಕಚೇರಿಯ ಮುಂದೆ ಸರ್ಕಾರದ ಖಾಸಗೀಕರಣದ ನೀತಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 2020ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದು,ಇದರಿಂದ ಸಾಕಷ್ಟು ಸಮಸ್ಯೆಯಾಗಲಿದ್ದು ರೈತರು ಮತ್ತು ಬಡವರ ಮೇಲೆ ದುಷ್ಪರಿಣಾಮ ಬೀರಲಿದೆ.ಅಲ್ಲದೇ ಖಾಸಗೀಕರಣದ ನೀತಿ ಕಾರ್ಮಿಕರಿಗ ಮರಣ ಶಾಸನವಾಗಲಿದೆ.ವಿದ್ಯುತ್ ಇಲಾಖೆ ಲಾಭದಲ್ಲಿ ನಡೆಯುತ್ತಿದ್ದರೂ ಸಹ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವ ಕ್ರಮ ಸರಿಯಲ್ಲ.ಸರ್ಕಾರ ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಲಾಯಿತು.
ಸೆಕ್ಷನ್ ಆಫೀಸರ್ ಉಮೇಶ್ ನಾಯಕ್,ಮೂರ್ತಪ್ಪ ಸೇರಿದಂತೆ 50ಕ್ಕೂ ಹೆಚ್ಚು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ನಂತರ ಕಪ್ಪುಪಟ್ಟಿ ಧರಿಸಿ ಕೆಲಸ ಮುಂದುವರಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ