ಹುಳಿಯಾರು :ರಾಜ್ಯ ಸರ್ಕಾರ ಕರೋನಾ ಕಾಯಿಲೆಯ ನಡುವೆ ಶಾಲಾ ಕಾಲೇಜುಗಳನ್ನು ಆರಂಭಿಸಲು ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳುತ್ತಿದ್ದು ಇದರಿಂದ ಪೋಷಕರಿಗೆ ಮತ್ತು ಶಿಕ್ಷಕ ವರ್ಗದವರಿಗೆ ಮಕ್ಕಳಿಗೆ ತೊಂದರೆ ಆಗುವುದರಿಂದ ಶಾಲಾ-ಕಾಲೇಜುಗಳನ್ನು ತೆರೆಯಬಾರದೆಂದು ಕರ್ನಾಟಕ ಕಾರ್ಮಿಕರ ರಕ್ಷಣಾ ವೇದಿಕೆ ರಿ. ಚಿಕ್ಕನಾಯಕನಹಳ್ಳಿ ತಾಲೂಕು ಘಟಕದ ಸದಸ್ಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಚಿಕ್ಕನಾಯಕನಹಳ್ಳಿಯಲ್ಲಿ ತಹಸೀಲ್ದಾರ್ ತೇಜಸ್ವಿನಿ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಸದಸ್ಯರುಗಳು ಕರೋನಾ ಸುರಕ್ಷತೆ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದ್ದು ಈ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕೆಂಬ ಒತ್ತಡ ಸರ್ಕಾರದ ಮೇಲೆ ಹೆಚ್ಚಾಗುತ್ತಿದ್ದು ಕರೋನಾ ತೀವ್ರತೆ ಕಡಿಮೆಯಾಗುವವರೆಗೂ ಶಾಲಾ ಕಾಲೇಜನ್ನು ಕರೆಯಬಾರದು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹೆಚ್.ಕೆ.ರವಿಶಂಕರ್,ಉಪಾಧ್ಯಕ್ಷ ತೇಜಸ್ ,ಪ್ರಧಾನ ಕಾರ್ಯದರ್ಶಿ ರವಿರಾಜ್ ,ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ,ಖಜಾಂಚಿ ಹರೀಶ್ ಹಾಗೂ ಸದಸ್ಯರುಗಳಾದ ಪ್ರವೀಣ್, ಸದ್ದಾಮ್, ಚೇತನ್,ಆನಂದ್, ಚೇತನ್ ಕುಮಾರ್ ಭಾಗವಹಿಸಿದ್ದರು.
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070