ಹುಳಿಯಾರು: 2020-21 ನೇ ಸಾಲಿನ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ ಕಿರು ಸಾಲ ಸೌಲಭ್ಯಕ್ಕಾಗಿ ಹುಳಿಯಾರು ಪಟ್ಟಣ ಪಂಚಾಯ್ತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪಟ್ಟಣದ ಬೀದಿಬದಿ ವ್ಯಾಪಾರಿಗಳು ಜಾತಿ, ಆದಾಯ ದೃಢೀಕರಣ ಪತ್ರ, ಆಧಾರ್ ಕಾರ್ಡ್ ನಕಲು,ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್ ನಕಲು, 2 ಭಾವಚಿತ್ರ, ಮೊಬೈಲ್ ಸಂಖ್ಯೆ, ಬೀದಿ ಬದಿ ವ್ಯಾಪಾರಿಗಳ ಐ.ಡಿ.ಕಾರ್ಡ್ ಮತ್ತು ಪ್ರಮಾಣ ಪತ್ರದ ನಕಲು ಸೇರಿ ಇನ್ನಿತರ ಅಗತ್ಯ ದಾಖಲಾತಿಗಳೊಂದಿಗೆ ದ್ವಿ ಪ್ರತಿಯಲ್ಲಿ ಪಂಚಾಯ್ತಿಯ ಕಛೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ