ವಿಷಯಕ್ಕೆ ಹೋಗಿ

ಹುಳಿಯಾರು:ಕರ್ನಾಟಕ ಬಂದ್ ಗೆ ಯಾವುದೇ ಪ್ರತಿಕ್ರಿಯೆ ಇಲ್ಲ :ಯತ್ನಾಳ್ ವಿರುದ್ಧ ಆಕ್ರೋಶ

ಜನಜೀವನ ಎಂದಿನಂತೆ: ಕರವೇಯಿಂದ ಪ್ರತಿಭಟನಾ ರ‍್ಯಾಲಿ


ಹುಳಿಯಾರು:ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದಿಗೆ ಹುಳಿಯಾರಿನಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಪಟ್ಟಣದಲ್ಲಿ ಬಂದ್ ವಾತಾವರಣ ಲವಲೇಶವೂ ಕಂಡುಬರಲಿಲ್ಲ.ವ್ಯಾಪಾರ-ವಹಿವಾಟು ಎಂದಿನಂತೆ ನಡೆಯಿತು.ಕೆಎಸ್ಆರ್ಟಿಸಿ ಬಸ್ ಸಂಚಾರ ಎಂದಿನಂತೆ ಇತ್ತು. ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿತು.ಎಂದಿನಂತೆ ಜನಸಂಚಾರ,ವಾಹನ ಸಂಚಾರ ಕಂಡುಬಂತು.ಅಂಗಡಿ-ಮುಂಗಟ್ಟುಗಳು,ಹೋಟಲ್ ಗಳು ಎಂದಿನಂತೆ ತೆರೆದಿತ್ತು.ಒಟ್ಟಾರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

       ಕನ್ನಡಪರ ಸಂಘಟನೆಗಳ ಪೈಕಿ ಕರ್ನಾಟಕ ರಕ್ಷಣಾ ವೇದಿಕೆ ಹುಳಿಯಾರು ಘಟಕದಿಂದ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.ಕರವೇ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಕರವೇ ಸರ್ಕಲ್ ನಿಂದ,ಬಸ್ ನಿಲ್ದಾಣ,ರಾಮಗೋಪಾಲ್ ಸರ್ಕಲ್ ಮೂಲಕ ನಾಡಕಚೇರಿಗೆ ಬೈಕ್ ರ‍್ಯಾಲಿಯಲ್ಲಿ ಆಗಮಿಸಿ ಉಪತಹಸೀಲ್ದಾರ್ ಸುಮತಿ ಅವರಿಗೆ ಮನವಿ ಸಲ್ಲಿಸಿದರು.

 

         ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಕೋಳಿ ಶ್ರೀನಿವಾಸ್ ಬೆಳಗಾವಿಯಲ್ಲಿ ಸದಾಕಾಲವೂ ಕನ್ನಡ ಧ್ವಜ, ಭಾಷೆ ವಿರೋಧಿಸುತ್ತ ಬಂದಿರುವ ಮರಾಠಿಗರಿಗೆ ನಿಗಮ ಮಂಡಳಿ ಸ್ಥಾಪನೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ನೋವುಂಟುಮಾಡಿದೆ ಎಂದರು.

 

         ಕನ್ನಡ ನಾಡು,ನುಡಿ,ಜಲ,ಭಾಷೆ ಗಾಗಿ ಹೋರಾಡುತ್ತಿರುವ ಕನ್ನಡ ಸಂಘಟನೆಯ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು ಕನ್ನಡ ಹೋರಾಟಗಾರರ ಬಗ್ಗೆ ಮಾತನಾಡಬೇಕಾದರೆ ನಾಲಿಗೆ ಹಿಡಿತದಲ್ಲಿರಬೇಕು.ಕನ್ನಡ ನಾಡು ನುಡಿ ಜಲದ ಬಗ್ಗೆ ಹೋರಾಟ ನಡೆಸಿಕೊಂಡು ಬರುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಬಗ್ಗೆ ಹಗುರವಾಗಿ ಮಾತನಾಡಿರುವ ಯತ್ನಾಳ್ ನಾಡಿನ ಜನರ,ಕನ್ನದ ಹೋರಾಟಗಾರರ ಕ್ಷಮೆ ಕೇಳಬೇಕು.ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದರು. ಮತ್ತೊಮ್ಮೆ ಇದೇ ರೀತಿ ಹೇಳಿಕೆ ಕೊಟ್ಟರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಸಿದರು.ಮರಾಠ ಅಭಿವೃದ್ಧಿ ನಿಗಮ ರಚನೆ ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

 

         ಕರವೇ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಪಾಟೀಲ್ ಯತ್ನಾಳ್ ವಿರುದ್ಧ ಘೋಷಣೆ ಕೂಗಿದರು.

 

     ಪ್ರತಿಭಟನೆಯಲ್ಲಿ ಕರವೇ ಉಪಾಧ್ಯಕ್ಷ ಮಂಜುನಾಥ್,ಪದಾಧಿಕಾರಿಗಳಾದ ಬಾಳೆಕಾಯಿ ಲಕ್ಷ್ಮಿಕಾಂತ್,ಮೆಡಿಕಲ್ ಚನ್ನಬಸವಯ್ಯ,ಹರೀಶ್,ನವೀನ್,ಬೇಕರಿ ಪ್ರಕಾಶ್,ಕುಮಾರ್, ಗಣೇಶ್,ಸಂತೋಷ್ ,ಪರಪ್ಪ,ಹೊನ್ನಪ್ಪ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...