ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಇಂದು ಜ.15ರಿಂದ ಅಖಿಲ ಭಾರತೀಯ ಮಟ್ಟದಲ್ಲಿ ಶುರುವಾಗಿದ್ದು ಚಿಕ್ಕನಾಯಕನಹಳ್ಳಿ ಮಂಡಲದ ಅಭಿಯಾನದ ಉದ್ಘಾಟನೆಯನ್ನು ಬಿಜೆಪಿ ಪ್ರಮುಖರು, ಮಾಜಿ ಶಾಸಕರು ಹಾಗೂ ಹಾಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆಗಿರುವ ಕೆ.ಎಸ್.ಕಿರಣ್ ಕುಮಾರ್ ಅವರು ಹುಳಿಯಾರು ಪಟ್ಟಣದಲ್ಲಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರ ಮೂಲಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಬಡಗಿ ರಾಮಣ್ಣ ಸೇರಿದಂತೆ ಆರೆಸ್ಸೆಸ್ ಸ್ವಯಂ ಸೇವಕರು,ಭಜರಂಗದಳದ ಕಾರ್ಯಕರ್ತರು,ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಸದಸ್ಯರು ಸೇರಿದಂತೆ ಶ್ರೀರಾಮ ಸದ್ಭಕ್ತರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ