ಸರ್ಕಾರದ ಸೂಚನೆಯಂತೆ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು/ನೌಕರರುಗಳ ಸಮಕ್ಷಮ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿ ಹಂದನಕೆರೆ ಗ್ರಾಮದ ಶ್ರೀ.ಕಣ್ಣಪ್ಪಸ್ವಾಮಿ ಛತ್ರ (ವಾಲ್ಮೀಕಿ ಭವನದಲ್ಲಿ ದಿನಾಂಕ: 20.02.2021 ರಂದು ಬೆಳಿಗ್ಗೆ 10.00 ರಿಂದ ಸಂಜೆ 5-00 ರವರೆಗೆ ಗ್ರಾಮಭೇಟಿ ಮಾಡಲಿದ್ದು, ಹಂದನಕೆರೆ ಗ್ರಾಮದ ಎಲ್ಲಾ ಸಾರ್ವಜನಿಕರುಗಳು ಯಾವುದೇ ಕುಂದು-ಕೊರತೆಗಳಿದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಲು ಈ ಮೂಲಕ ಕೋರಲಾಗಿದೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ