ಹುಳಿಯಾರು ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮೋಹನ್ ಕುಮಾರ್‌ಗೆ ಡಾಕ್ಟರೇಟ್ ಪದವಿ
ಹುಳಿಯಾರು ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮೋಹನ್ ಕುಮಾರ್‌ಗೆ ಡಾಕ್ಟರೇಟ್ ಪದವಿ
ಹುಳಿಯಾರು: ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹುಳಿಯಾರು- ಇಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ. ಮೋಹನ್ ಕುಮಾರ್ ಎಂ.ಜೆ. ಅವರು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ನಟರಾಜ್ ಹುಳಿಯಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಬರ್ಟೋಲ್ಟ್ ಬ್ರೆಕ್ಟ್ ಮತ್ತು ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ಚರಿತ್ರೆ ಮತ್ತು ಸಮಕಾಲೀನ ಸಮಾಜ: ತೌಲನಿಕ ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದೆ.
ಮೂಲತಃ ಮೈಸೂರು ಜಿಲ್ಲೆಯ, ಕೆ.ಆರ್. ನಗರ ತಾಲ್ಲೂಕಿನ ಮಿರ್ಲೆ ಗ್ರಾಮದವರಾದ ಇವರು ಶ್ರೀ ಜಯರಾಮೇಗೌಡ ಮತ್ತು ದಿವಂಗತ ಸರಸ್ವತಮ್ಮ ದಂಪತಿಗಳ ಪುತ್ರರಾಗಿರುತ್ತಾರೆ.
ಡಾಕ್ಟರೇಟ್ ಪದವಿಗೆ ಭಾಜನರಾಗಿರುವ ಮೋಹನ್ ಕುಮಾರ್ ಅವರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ಕೃಷ್ಣಮೂರ್ತಿ ಬಿಳಿಗೆರೆ ಸೇರಿದಂತೆ ಪ್ರಾಧ್ಯಾಪಕರು ಹಾಗೂ ಆಡಳಿತ ವರ್ಗದವರು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ