ಹುಳಿಯಾರು ಹೋಬಳಿಯ ಬೋರನಕಣಿವೆ ಸರ್ಕಾರಿ ಶಾಲೆಯಲ್ಲಿ ವ್ಯಕ್ತಿತ್ವ ವಿಕಾಸನ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ವೈದ್ಯರಾದ ಡಾ.ಸತೀಶ್‌ರವರು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನದ ಬಗ್ಗೆ ಪ್ರವಚನ ನೀಡಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ಎಸ್.ಮಂಜುಳಾರವರ ಸೇವೆಯನ್ನು ಗುರುತಿಸಿ ಶಾಲೆಯ ಶಿಕ್ಷಕ ವೃಂದದಿಂದ ಸನ್ಮಾನಿಸಿ ಗೌರವಿಸಲಾಯಿತು.
ಮುಖ್ಯ ಶಿಕ್ಷಕ ಟಿ.ಎನ್.ರಮೇಶ್ ಅಧ್ಯಕ್ಷತೆ ವಹಿಸಿದ್ದರು.
ಶಾಲೆಯ ಬೋಧಕ ಹಾಗೂ ಆಡಳಿತ ವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ