*ಡೆಂಗ್ಯೂ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ*
ಹುಳಿಯಾರಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಮೃತ ಜ್ಞಾನ ವಿಕಾಸ ಧರ್ಮಸ್ಥಳ ಸಂಘದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಆರೋಗ್ಯ ತರಬೇತಿ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣ ಅಧಿಕಾರಿ ರೇಣುಕರಾಜ ಮಾತನಾಡಿ ಸೊಳ್ಳೆಗಳಿಂದ ಹರಡುವ ಡೆಂಗ್ಯೂ ಚಿಕನಗುನ್ಯಾ ಮಲೇರಿಯಾ ರೋಗದ ಬಗ್ಗೆ ಮಾಹಿತಿ ನೀಡಿದರು.ರೋಗ ತಡೆಗಟ್ಟಲು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಹಾಗೂ ಮನೆಯ ತೊಟ್ಟಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ತಿಳಿಸಿದರು.ಸೊಳ್ಳೆ ಕಡಿತದಿಂದ ಪಾರಾಗಲು ಸೊಳ್ಳೆಪರದೆ, ಸೊಳ್ಳೆ ಕಾಯಿಲ್, ಕೀಟಗಳಿಗೆ ಜಾಲರಿಯನ್ನು ಅಳವಡಿಸಲು ಸೂಚಿಸಿದರು. ಜನಸಂಖ್ಯಾ ಸ್ಫೋಟದ ಬಗ್ಗೆ ಮಾತನಾಡಿ ಜನಸಂಖ್ಯೆ ನಿಯಂತ್ರಣ ಮಾಡಲು ಆರೋಗ್ಯ ಇಲಾಖೆಯಿಂದ ದೊರಕುವ ತಾತ್ಕಾಲಿಕ ವಿಧಾನಗಳು ಹಾಗೂ ಶಾಶ್ವತ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಗಂಡಸರಿಗೆ ಮಾಡುವ ಸಂತಾನಹರಣ ಶಸ್ತ್ರಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ತಾಲೂಕು ಯೋಜನಾಧಿಕಾರಿ ಪ್ರೇಮಾನಂದ್, ಗೀತಾ,ಯಶೋದ ಹಾಗೂ ಚೈತ್ರ,ಪುಷ್ಪ ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ