ಜಿಲ್ಲೆಯ ಅತಿ ದೊಡ್ಡ ಹೋಬಳಿ ಕೇಂದ್ರವಾಗಿರುವ ಹುಳಿಯಾರು ಪಟ್ಟಣದಲ್ಲಿ ಆಧಾರ್ ಗುರುತಿನ ಚೀಟಿಗೆ ಆಗುತ್ತಿದ್ದ ನೂಕುನುಗ್ಗಲಿನ ಸಮಸ್ಯೆ ಬಗ್ಗೆ ಮಾಧ್ಯಮದ ವರದಿಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಯವರು ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಹೆಚ್ಚುವರಿಯಾಗಿ ಆಧಾರ್ ನೋಂದಣಿ ಕೇಂದ್ರ ತೆರೆಯುವುದರ ಮೂಲಕ ಮೂಲಕ ಸಮಸ್ಯೆಗೆ ಪರಿಹಾರಕ್ಕೆ ಮುಂದಾಗಿದ್ದಾರೆ.
ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆಧಾರ್ ನೋಂದಣಿ ಕೇಂದ್ರಕ್ಕೆ ಚಾಲನೆ ನೀಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ ಆಧಾರ್ ಕಾರ್ಡ್‌ನಲ್ಲಿನ ಕೆಲ ಬದಲಾವಣೆ ಹಾಗೂ ತಿದ್ದುಪಡಿಗಳಿಗೆ ಇಲ್ಲಿ ಅವಕಾಶ ಮಾಡಲಾಗಿದ್ದು ಪ್ರತಿನಿತ್ಯ 50 ಆಧಾರ್ ನೋಂದಣಿಗೆ ಟೋಕನ್ ವ್ಯವಸ್ಥೆ ಮೂಲಕ ಅವಕಾಶ ಕಲ್ಪಿಸಲಾಗಿದೆ. ನಿತ್ಯವೂ ಬೆಳಗ್ಗೆ 10 ಗಂಟೆಯಿಂದ 10:30ರವರೆಗೆ 50 ಮಂದಿಗೆ ಪಂಚಾಯಿತಿ ಸಿಬ್ಬಂದಿಯಿಂದ ಟೋಕನ್ ವಿತರಿಸಲಾಗುವುದು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ