ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಕ್ಸಿನೇಷನ್ ಆಂದೋಲನ

ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕ-1 ಮತ್ತು ಘಟಕ-2 ಹಾಗೂ ಯುವ ರೆಡ್ ಕ್ರಾಸ್ ಹಾಗೂ ರೆಡ್ ರಿಬ್ಬನ್ ಘಟಕದ ವತಿಯಿಂದ ಕೋವಿಡ್-19 ವ್ಯಾಕ್ಸಿನೇಷನ್ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ   ಎಲ್ಲ  ವಿದ್ಯಾರ್ಥಿಗಳು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನೇಷನ್ ಪಡೆಯಬೇಕು. ಕಾಲೇಜಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು ಮತ್ತು ಸುರಕ್ಷಾ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಹುಳಿಯಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ರೇಣುಕಾಪ್ರಸಾದ್,ಜ್ಯೋತಿ ಕಲಾ ಮತ್ತು ಆಶಾ ಕಾರ್ಯಕರ್ತೆಯಾದ ಗಾಯಿತ್ರಮ್ಮ ಅವರು ವ್ಯಾಕ್ಸಿನೇಷನ್‌ ನಡೆಸಿಕೊಟ್ಟರು. ಒಟ್ಟು 69 ವಿದ್ಯಾರ್ಥಿಗಳು ವ್ಯಾಕ್ಸಿನೇಷನ್‌ ಪಡೆದರು. ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿಗಳಾದ ಪ್ರೊ.ಆರ್.ಶಿವಯ್ಯ,ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ.ಮೋಹನ್ ಕುಮಾರ್ ಎಂ.ಜೆ ಮತ್ತು ಪ್ರೊ. ಖಲೀಲ್ ಹಾಗೂ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಹಾಜರಿದ್ದರು.