ಎಬಿವಿಪಿ ಹುಳಿಯಾರು ಘಟಕದವತಿಯಿಂದ ವಿದ್ಯಾರ್ಥಿಗಳಿಗೆ ಭದ್ರತೆ ನೀಡಲು ಕೋರಿ ಪೊಲೀಸ್ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರಿಗೆ ಮನವಿ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಘಟಕದವತಿಯಿಂದ ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಹೆಚ್ಚಿನ ಭದ್ರತೆಯನ್ನು ಹೆಚ್ಚಿಸುವ ಬಗ್ಗೆ ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಕಿರಣ್ ಕುಮಾರ್ ಹಾಗೂ ಪೊಲೀಸ್ ಠಾಣಾಧಿಕಾರಿಗಳಾದ ಕೆ.ವಿ ಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಹುಳಿಯಾರು-ಕೆಂಕೆರೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹುಳಿಯಾರು-ಕೆಂಕೆರೆ ಶಾಲಾ ಕಾಲೇಜುಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಹೆಚ್ಚಿನ ಭದ್ರತೆ ಒದಗಿಸುವ ಕಾರಣದಿಂದ ಶಾಶ್ವತ ಗೇಟ್ ವ್ಯವಸ್ಥೆ ಮತ್ತು ಸಿಸಿಟಿವಿ ಅಳವಡಿಸಿ ವಿದ್ಯಾರ್ಥಿಗಳು ಸಂಚರಿಸುವ ಸಮಯದಲ್ಲಿ ಹೆಚ್ಚಿನ ನಿಗಾ ವಹಿಸಬೇಕೆಂದು ಮನವಿ ನೀಡಲಾಯಿತು. ಮನವಿ ಪತ್ರ ಸ್ವೀಕರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್ ಮುಂದಿನ 15 ದಿನಗಳಲ್ಲಿ ಶಾಶ್ವತ ಪರಿಹಾರವನ್ನು ಒದಗಿಸುವ ಭರವಸೆ ನೀಡಿದರು. ವಿದ್ಯಾರ್ಥಿಗಳ ಮನವಿ ಪತ್ರ ಸ್ವೀಕರಿಸಿದ ಪೊಲೀಸ್ ಠಾಣಾಧಿಕಾರಿ ಕೆ.ವಿ.ಮೂರ್ತಿ ಸೋಮವಾರದಿಂದಲೇ ಹೆಚ್ಚಿನ ನಿಗಾವಹಿಸಿ ಸಿಸಿಟಿವಿ ಅಳವಡಿಸುವ ಭರವಸೆ ನೀಡಿದರು. ಈ ವೇಳೆಯಲ್ಲಿ ಅತಿಥಿ ಉಪನ್ಯಾಸಕರಾದ ನರೇಂದ್ರಬಾಬು,ಕಾರ್ಯಕರ್ತರಾದ ಹರೀಶ್ ಎಸ್.ಎನ್ ರಾಕೇಶ್ ಹಾಗೂ ಗಿರೀಶ್ , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕನಾಯಕನಹ...