ಹುಳಿಯಾರು-ಕೆಂಕೆರೆಯ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ-1 ಮತ್ತು 2ರ ವತಿಯಿಂದ, ಪ್ರಾಥಮಿಕ ಆರೋಗ್ಯ ಕೇಂದ್ರ ಹುಳಿಯಾರು ಇವರ ಸಹಯೋಗದೊಂದಿಗೆ ಇಂದು ಶುಕ್ರವಾರ "ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮ"ವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಹುಳಿಯಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಪರಿವೀಕ್ಷಕರಾದ ಬಿ.ಸಿ.ರೇಣುಕಾ ರಾಜ್ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ಷಯ ರೋಗ, ಅದರ ಹರಡುವಿಕೆ, ಲಕ್ಷಣಗಳು ಹಾಗೂ ಅದನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.
ಉಪನ್ಯಾಸದ ನಂತರ ವಿದ್ಯಾರ್ಥಿಗಳಿಗೆ ಲಿಖಿತ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಕಾವ್ಯ ಸಿ.ಆರ್. ಪ್ರಥಮ ಬಿ.ಕಾಂ., ಪ್ರಥಮ ಬಹುಮಾನ; ರಾಧಿಕಾ ಕೆ., ಪ್ರಥಮ ಬಿ.ಕಾಂ., ದ್ವಿತೀಯ ಬಹುಮಾನ ಮತ್ತು ಪವನ ಸಿ.ಎಂ., ಪ್ರಥಮ ಬಿ.ಕಾಂ, ತೃತೀಯ ಬಹುಮಾನ ಪಡೆದರು.
ಪ್ರಾಚಾರ್ಯರಾದ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಪ್ರಥಮ ಬಹುಮಾನವಾಗಿ 750ರೂ. ದ್ವಿತೀಯ ಬಹುಮಾನವಾಗಿ 500ರೂ. ಮತ್ತು ತೃತೀಯ ಬಹುಮಾನವಾಗಿ 250ರೂ. ಕೊಡಲಾಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ