ವಿಷಯಕ್ಕೆ ಹೋಗಿ

ನ್ಯಾಕ್ ಪೀರ್ ಕಮಿಟಿಯಿಂದ ಬಿ.ಎಂ.ಎಸ್ ಕಾಲೇಜು ಬಗ್ಗೆ ಮೆಚ್ಚುಗೆ

ಹುಳಿಯಾರಿನ ಬಿ.ಎಂ.ಎಸ್.ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ನ್ಯಾಕ್ ತಂಡವು 2ನೇ ದಿನವಾದ ಬುಧವಾರ ಕೂಡ ಪರಿಶೀಲನೆ ನಡೆಸಿತು.

ಮೊದಲು ಕಾಲೇಜಿನ ಕಛೇರಿಗೆ ಭೇಟಿ ನೀಡಿ ಹಲವಾರು ದಾಖಲೆ ಪರಿಶೀಲಿಸಿದರು.ವಿದ್ಯಾರ್ಥಿಗಳ ಪ್ರವೇಶಾತಿ,ಕಾಲೇಜು ಸಂಗ್ರಹಿಸುವ ವಿವಿಧ ಶುಲ್ಕಗಳ ಮಾಹಿತಿ,ಪ್ರವೇಶಾತಿ ಸಮಯದಲ್ಲಿ ನೀಡಲಾಗುವ ಕಾಲೇಜು ಕೈಪಿಡಿ,ವಿದ್ಯಾರ್ಥಿಗಳಿಗೆ ನೀಡಲಾಗುವ ಶಿಷ್ಯವೇತನ, ಪರೀಕ್ಷಾ ಸಂಬಂಧಿತ ಶುಲ್ಕ,ಪ್ರವೇಶ ಪತ್ರ, ಅಂಕಪಟ್ಟಿ ವಿತರಣೆ....ಹೀಗೆ ಹಲವಾರು ವಿಷಯಗಳ ಕುರಿತು ದಾಖಲೆ ಪರಿಶೀಲಿಸಿದರು.ಕೆಲವು ಸಲಹೆ-ಸೂಚನೆ ನೀಡಿದರು.ಕಾಲೇಜು ಕೈಪಿಡಿ ಪುಸ್ತಕ ಆಕರ್ಷಣಿಯವಾಗಿರಲಿ ಎಂದು ಸಲಹೆ ನೀಡಿದರು.

IQAC ಸಂಚಾಲಕರಾದ ಡಾ.ಸುಷ್ಮಾ ಎಲ್.ಬಿರಾದಾರ್ ಅವರು ನ್ಯಾಕ್ ಪೀರ್ ತಂಡಕ್ಕೆ ಸೂಕ್ತ ದಾಖಲೆ ಒದಗಿಸಿ ಸ್ಪಷ್ಟನೆ ನೀಡಿದರು.ವೇಳಾಪಟ್ಟಿ ಪ್ರಕಾರ ಎಲ್ಲಾ ದಾಖಲೆಗಳ ಪರಿಶೀಲನೆ ಹಾಗೂ ಸ್ಪಷ್ಟನೆ ಪಡೆದ ನಂತರ ಮುಕ್ತಾಯ ಸಭೆ ಏರ್ಪಡಿಸಲಾಯಿತು.

ಈ ಸಭೆಯಲ್ಲಿ ನ್ಯಾಕ್ ಪೀರ್ ತಂಡದ ಸದಸ್ಯರು,ಪ್ರಾಂಶುಪಾಲರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದರು.IQAC ಸಂಚಾಲಕರಾದ ಡಾ.ಸುಷ್ಮಾ ಎಲ್ ಬಿರಾದಾರ್ ಸ್ವಾಗತಿಸಿದರು.

ನ್ಯಾಕ್ ತಂಡದ ಮುಖ್ಯಸ್ಥರಾದ ಡಾ.ಕೇಸರಿ ಲಾಲ್ ವರ್ಮಾರವರು ಕಾಲೇಜಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಹೋಬಳಿ ಪ್ರದೇಶದಲ್ಲಿದ್ದರೂ ಇಲ್ಲಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಪರಿಶ್ರಮದಿಂದ ಕಾಲೇಜು ಉತ್ತಮ ಬೆಳವಣಿಗೆ ಕಂಡಿದೆ.ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೀರಿ.ನಿಮ್ಮ ವಿದ್ಯಾರ್ಥಿಗಳು ಸಮಾಜದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ.ಕಾಲೇಜಿನ ಕೀರ್ತಿ ಎಲ್ಲೆಡೆ ಹರಡಲಿ ಎಂದು ಹಾರೈಸಿದರು.ತಮ್ಮ ಅಭಿಪ್ರಾಯ ಮಂಡನೆಯಲ್ಲಿ ವಿಶೇಷವಾಗಿ  ಡಾ.ಲೋಕೇಶ ನಾಯ್ಕ ಹಾಗೂ ಪ್ರೊ.ಶಿವಯ್ಯ ಅವರ ನೇತೃತ್ವದಲ್ಲಿ ನೀಡಿದ ಆತಿಥ್ಯದ ಬಗ್ಗೆ ಕೊಂಡಾಡಿದರು.
ನ್ಯಾಕ್ ತಂಡದ ಮತ್ತೊಬ್ಬ ಸದಸ್ಯರಾದ ಡಾ.ಜಾವೇದ್ ಅಖ್ತರ್ ಮಾತನಾಡಿ,ಕಾಲೇಜಿನ ಸಿಬ್ಬಂದಿಗಳ ಕಠಿಣ ಪರಿಶ್ರಮ,ಕಾಲೇಜಿನ ಹಾಗೂ ವಿದ್ಯಾರ್ಥಿಗಳ ಬಗೆಗಿನ ಕಾಳಜಿ,ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರು ಸಮಾಜದ ಆಸ್ತಿ.ಸಮಾಜಕ್ಕೆ ಒಳ್ಳೆಯ ಪ್ರಜೆಗಳು ನೀಡುವುದು ನಮ್ಮ ಕರ್ತವ್ಯ. ನಾವು ನಂಬಿರುವ ದೇವರಿಗೆ ನಾವು ಮಾಡಿರುವ ಕೆಲಸದ ಲೆಕ್ಕ ಒಪ್ಪಿಸಬೇಕಾಗುತ್ತದೆ.ಹೀಗಾಗಿ ನಮ್ಮ ನಮ್ಮ ಆತ್ಮಸಾಕ್ಷಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ನ್ಯಾಕ್ ತಂಡದ ಮತ್ತೊಬ್ಬ ಸದಸ್ಯ ಡಾ.ಪ್ರಕಾಶ್ ಬನ್ಮೇರು ಅಧ್ಯಾಪಕರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತಾ, ಅಧ್ಯಾಪಕರು ಸಂಶೋಧನಾ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು.ಹೆಚ್ಚು ಲೇಖನ,ಪುಸ್ತಕ ಪ್ರಕಟಿಸಬೇಕು ಎಂದು ಸಲಹೆ ನೀಡಿದರು.ಕಾಲೇಜಿಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳು ಒದಗಿಸುವಂತೆ ಕಾಲೇಜು ಅಭಿವೃದ್ಧಿ ಸಮಿತಿಗೆ ಒತ್ತಾಯಿಸಬೇಕು ಎಂದು ಕಿವಿಮಾತು ಹೇಳಿದರು.ನ್ಯಾಕ್ ನ ಮಾದರಿಗೆ ಅನುಗುಣವಾಗಿ ದಾಖಲೆಗಳ ನಿರ್ವಹಣೆ ಮಾಡಿದ್ದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಗ್ರೇಡ್ ಪಡೆಯಲು ಅನುಕೂಲವಾಗಬಹುದು ಎಂದು ತಿಳಿಸಿದರು. 

ಪ್ರಾಂಶುಪಾಲರಾದ ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ನಮ್ಮ ಕಾಲೇಜಿನಲ್ಲಿ ಎಲ್ಲಾ ಸಿಬ್ಬಂದಿಗಳು ಒಂದು ತಂಡವಾಗಿ ಕೆಲಸ ಮಾಡಿದ್ದೇವೆ.ಅದು ನಮ್ಮ ಯಶಸ್ಸಿನ ಮೂಲಮಂತ್ರ ಎಂದು ಅಭಿಪ್ರಾಯಪಟ್ಟರು.

IQAC ಸಹ ಸಂಚಾಲಕರಾದ ಶ್ರೀ  ಮಲ್ಲಿಕಾರ್ಜುನರವರು ಎಲ್ಲರಿಗೂ ವಂದಿಸಿದರು.

---------------------------------

ಜಾಹಿರಾತು

ಹುಳಿಯಾರಿನಲ್ಲಿ ವೈದ್ಯಕೀಯ ಸೇವೆಗೆ ಹೆಸರಾಗಿರುವ ಕಲ್ಬತರು ಆಸ್ಪತ್ರೆಗೆ ಪ್ರತಿ ಶುಕ್ರವಾರ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು,  ಬಂಜೆತನ ನಿವಾರಣಾ ತಜ್ಞರು, ಭೇಟಿ ಸೌಲಭ್ಯ ಕಲ್ಪಿಸಲಾಗಿದೆ.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...