ಹುಳಿಯಾರು: ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯಾಸಕ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಸಹಕಾರಿಯಾಗಿದ್ದು ವಿದ್ಯಾರ್ಥಿಗಳು ಇದನ್ನು ಅಭ್ಯಸಿಸುವ ಮೂಲಕ ಹೆಚ್ಚಿನ ಅಂಕ ಪಡೆಯುವಂತೆ ಕೆಂಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕಾಸ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಹುಳಿಯಾರು ಸಮೀಪದ ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜಯವಾಣಿ ವಿದ್ಯಾರ್ಥಿ ಮಿತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.ವಿಜಯವಾಣಿ ಪತ್ರಿಕೆಯವರು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಶಾಲಾ ಮಕ್ಕಳಿಗಾಗಿ ಪ್ರತಿನಿತ್ಯ ವಿದ್ಯಾರ್ಥಿ ಮಿತ್ರ ಪುರವಣಿಯನ್ನು ನೀಡುತ್ತಿದ್ದು, ಈ ಪತ್ರಿಕೆಯು ಎಸ್ಎಸ್ಎಲ್ಸಿ ಪರೀಕ್ಷೆ ಅಲ್ಲದೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಹ ಸಹಾಯವಾಗಲಿದ್ದು, ವಿದ್ಯಾರ್ಥಿಗಳು ಇದನ್ನು ಓದಿ, ಸಂಗ್ರಹಿಸಿಟ್ಟುಕೊಳ್ಳುವುದು ಮೂಲಕ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಪತ್ರಕರ್ತ ಕಿರಣ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಪಠ್ಯಪುಸ್ತಕ ದೊಂದಿಗೆ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡರೆ ಸಾಮಾನ್ಯ ಜ್ಞಾನ ಹೆಚ್ಚುವುದಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹ ಅನುಕೂಲವಾಗಲಿದೆ. ತಮ್ಮ ಗ್ರಾಮದ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತೀಕರಣಕ್ಕಾಗಿ ಎರಡು ತಿಂಗಳ ಕಾಲ ಉಚಿತವಾಗಿ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ವಿತರಿಸಲು ತಮ್ಮ ಸ್ವಂತ ಹಣ ಖರ್ಚು ನೀಡುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕಾಸ್ ಅವರ ಕಾರ್ಯ ಶ್ಲಾಘನೀಯ. ಇದು ಎಲ್ಲರಿಗೂ ಮಾದರಿಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಮಹೇಶ್, ತಮ್ಮಯ್ಯ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ