ವಿಷಯಕ್ಕೆ ಹೋಗಿ

ಬೈಫ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ||ಜಿ.ಎನ್.ಎಸ್. ರೆಡ್ಡಿ ಅವರಿಗೆ ಸನ್ಮಾನ

ಬೈಫ್ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಡೆವೆಲಪ್ಮೆಂಟ್ ಕರ್ನಾಟಕದ ಉಪಾಧ್ಯಕ್ಷರು ಹಾಗೂ ಅಕ್ಷಯಕಲ್ಪ ಸಂಸ್ಥೆಯ ಸಂಸ್ಥಾಪಕರಾದ 
ಡಾ|| ಜಿ.ಎನ್.ಎಸ್. ರೆಡ್ಡಿಯವರನ್ನು 
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೆಸರಾಂತ ಮಠವಾದ ಶ್ರೀ ಚರಪಟ್ಟಾಧ್ಯಕ್ಷರ ಮಠಾಧಿಪತಿಗಳಾದ ಶ್ರೀ ಮೃತ್ಯುಂಜಯ ದೇಶೀಕೇಂದ್ರ ಸ್ವಾಮೀಜಿಗಳು  
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜನತೆಯ ಪರವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಡಾ|| ಜಿ.ಎನ್.ಎಸ್. ರೆಡ್ಡಿಯವರು ಗ್ರಾಮೀಣ ಅಭಿವೃದ್ಧಿ, ಹೈನುಗಾರಿಕೆ, ಅರಣ್ಯ ಕೃಷಿ, ಸುಸ್ಥಿರ ಕೃಷಿ, ರೇಷ್ಮೆ ಕೃಷಿ, ಮಹಿಳಾ ಸಬಲೀಕರಣ, ಜಲಾನಯನ ಅಭಿವೃದ್ಧಿ, ಮಳೆನೀರು ಕೊಯ್ಲು ಸಂರಕ್ಷಣೆ, ಕೆರೆ ಸಂರಕ್ಷಣೆ, 
ಅಂತರ್ಜಲ ಅಭಿವೃದ್ಧಿ, ಮೈಕ್ರೋ ಫೈನಾನ್ಸ್ ಹಾಗೂ ಹಲವಾರು ಯೋಜನೆಗಳನ್ನು ಇಡೀ ಕರ್ನಾಟಕದ ಉದ್ದಗಲಕ್ಕೂ ಹಾಗೂ ವಿಶೇಷವಾಗಿ ನಮ್ಮ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಅನುಷ್ಠಾನಕ್ಕೆ ತರುವಲ್ಲಿ ವಹಿಸಿದ್ದ ಪಾತ್ರವನ್ನು ನೆನಪಿಸಿಕೊಂಡು ಅದಕ್ಕಾಗಿ ಅವರಿಗೆ ಜನತೆಯ ಪರವಾಗಿ ಅಭಿನಂದನೆ ಮತ್ತು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ನಮ್ಮ ತಾಲೂಕಿನ ಮಂಜುನಾಥಪುರಕ್ಕೆ ಅಂದಿನ ರಾಷ್ಟ್ರಪತಿಗಳಾದ ಶ್ರಿ ಅಬ್ದುಲ್ ಕಲಾಂ ಅವರು ಭೇಟಿನೀಡುವಲ್ಲಿ ಶ್ರೀ ರೆಡ್ಡಿಯವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಬದ್ಧತೆ, ಗುಣಾತ್ಮಕ ಕ್ರಿಯಾಶೀಲತೆ ಇಡೀ ಭಾರತದ ಮಟ್ಟದಲ್ಲಿ ಹೆಸರುವಾಸಿಯಾಗಿದ್ದನ್ನು 
ನೆನಪಿಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಠದ ವತಿಯಿಂದ ಭಕ್ತಾಧಿಗಳು  ಹಾಗೂ ಜೆ.ಸಿ.ಪುರ ಪಂಚಾಯಿತಿ ಮಾಜಿ ಛೇರ್ಮನ್ ಶಂಕರಲಿಂಗಪ್ಪನವರ ಮಕ್ಕಳಾದ ಶ್ರೀ ಷಡಕ್ಷರಿ ಶಂಕರಲಿಂಗಪ್ಪ ಕುಟುಂಬದ ಸದಸ್ಯರು ಹಾಗೂ ಶ್ರೀ ಷಫೀ ಅಹಮದ್ ಇನ್ನಿತರ ಗ್ರಾಮಸ್ಥರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...