ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ 22/04 /2022 ರಂದು ಶುಕ್ರವಾರ ಬೆಳಗ್ಗೆ 7.30 ಕ್ಕೆ ಶ್ರೀ ರೇಣುಕಾ ಎಲ್ಲಮ್ಮ ದೇವಿಯವರ ರಥೋತ್ಸವವು ವಿವಿಧ ಧಾರ್ಮಿಕ ಕಾರ್ಯಗಳು ಹಾಗೂ ವಾದ್ಯ ಮೇಳದೊಂದಿಗೆ ಸಕಲ ಭಕ್ತಾದಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಬೆಳಗ್ಗೆ 7.30 ಕ್ಕೆ ಪ್ರಾರಂಭವಾಗಿ ಊರಿನ ಪ್ರಮುಖ ರಾಜಬೀದಿಗಳಲ್ಲಿ ತಾಯಿಯವರ ರಥೋತ್ಸವವು ವೈಭವದಿಂದ ನೆರವೇರಿ ಸಂಜೆ 4:30 ಕ್ಕೆ ನೆಲೆ ನಿಂತಿತ್ತು.ಶ್ರೀ ಕರಿಯಮ್ಮದೇವಿ, ಶ್ರೀ ಆಂಜನೇಯಸ್ವಾಮಿ, ಶ್ರೀಪಾತರಾಯ ಸ್ವಾಮಿ ದೇವರುಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದವು . ಸುಮಾರು ಗ್ರಾಮದ ಎರಡರಿಂದ ಮೂರು ಕಿಲೋಮೀಟರ್ ದೂರ ರಥೋತ್ಸವ ಎಳೆಯುವುದು ಇಲ್ಲಿನ ವಿಶೇಷ.ಈ ಸಂದರ್ಭದಲ್ಲಿ ಗ್ರಾಮದ ಸಕಲ ಭಕ್ತರು ತಮ್ಮ ಹರಕೆ ಸಲ್ಲಿಸಿ ಹಾರ ,ಫಲಹಾರ ಪಾನಕ ಮುಂತಾದ ಮುಂತಾದ ಸೇವೆ ಸಲ್ಲಿಸುತ್ತಾರೆ. ಸಕಲ ಭಕ್ತಾದಿಗಳು ಶ್ರೀದೇವಿಯವರ ರಥೋತ್ಸವ ಕಾರ್ಯದಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು. ಶ್ರೀ ಕರಿಯಮ್ಮ ದೇವಿ ಮತ್ತು ಶ್ರೀ ರೇಣುಕಾ ಎಲ್ಲಮ್ಮ ದೇವಿ ಗೆಳೆಯರ ಬಳಗದವರಿಂದ ಶ್ರೀ ರೇಣುಕ ಎಲ್ಲಮ್ಮ ದೇವಾಲಯದ ಮೂಲ ವಿಗ್ರಹಕ್ಕೆ ಹಾಗೂ ದೇವಸ್ಥಾನದಲ್ಲಿ ವಿಶೇಷ ಹಣ್ಣಿನ ಅಲಂಕಾರದ ವ್ಯವಸ್ಥೆ ಮಾಡಲಾಗಿತ್ತು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ