ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿಯ ಹೊನ್ನಶೆಟ್ಟಿಹಳ್ಳಿಯಲ್ಲಿ ನಬಾರ್ಡ್ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್‌ವತಿಯಿಂದ ಜಂಟಿಯಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು
ಮತ್ತಿಘಟ್ಟ ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾದ ನೀರಜ್ ಕುಮಾರ್ ಮಾತನಾಡಿ ನಮ್ಮ ಬ್ಯಾಂಕಿನಲ್ಲಿ ಈಗಾಗಲೇ ಸಾವಿರಾರು ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ವಿತರಿಸಿದ್ದು ಅನೇಕ ರೈತರು ಇದರ ಪ್ರಯೋಜನ ಪಡೆದಿದ್ದಾರೆ.ಹಾಗಾಗಿ ಉಳಿದ ರೈತರು ಕೂಡ ಕ್ರೆಡಿಟ್ ಕಾರ್ಡ್ ಸೌಲಭ್ಯ ಪಡೆಯಬೇಕೆಂದು ಕರೆ ನೀಡಿದರು.
ಚಿಕ್ಕನಾಯಕನಹಳ್ಳಿಯ ಆರ್ಥಿಕ ಸಾಕ್ಷರತಾ ಕೇಂದ್ರದ ಆರ್ಥಿಕ ಸಲಹೆಗಾರರಾದ ಆರ್. ಎಂ. ಕುಮಾರಸ್ವಾಮಿಯವರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವುದರಿಂದ ಸಿಗುವ ಅನುಕೂಲತೆಗಳು ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಪಡೆದಲ್ಲಿ ಬಡ್ಡಿ ರಿಯಾಯಿತಿ, ಅಪಘಾತ ವಿಮೆಸೌಲಭ್ಯ, ಓ ಡಿ, ಫಸಲ್ ಭೀಮಾ ಯೋಜನೆ ಮುಂತಾದ ಅನುಕೂಲಗಳಿವೆ ಎಂದರು.
ಅಲ್ಲದೇ ಪ್ರಧಾನಮಂತ್ರಿ ಸುರಕ್ಷಾ ಭಿಮಾ ಹಾಗೂ ಜೀವನ ಜ್ಯೋತಿ ಭೀಮಾ ಯೋಜನೆಯ ಬಗ್ಗೆ ಸಹ ಮಾಹಿತಿ ನೀಡಿದರು.ಎಟಿಎಂ ಪಡೆದರು ಕೂಡ 2ಲಕ್ಷ ಅಪಘಾತ ವಿಮೆ ದೊರೆಯುತ್ತದೆ ಎಂದು ತಿಳಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತಿಘಟ್ಟ ಶಾಖೆಯ ಸುದರ್ಶನ್ ಬಿ.ಸಿ. ಹಾಗೂ ರಾಘವೇಂದ್ರಾಚಾರ್ ಕಾಯಕ್ರಮದಲ್ಲಿ ಉಪಸ್ಥಿತರಿದ್ದರು
ಹೆಚ್.ಎಲ್.ಕೋಮಲ ಕಾಯಕ್ರಮದ ಅಧ್ಯಕ್ಷತೆ ವಹಿಸಿದ್ದು ಎಲ್ ಸಿ ಆರ್ ಪಿ ಭಾರತಿ ನಿರೂಪಿಸಿ,ಅಂಗನವಾಡಿ ಕಾರ್ಯಕರ್ತೆ ಪುಷ್ಪವತಮ್ಮ ವಂದಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ