ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಅನೇಕ ಯೋಜನೆಗಳನ್ನು ಕೈಗೊಂಡು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಈ ಯೋಜನೆಯು ಬಡ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ತಮ್ಮಡಿಹಳ್ಳಿ ದೇವರಾಜ್ ಶ್ಲಾಘಿಸಿದರು
ಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳೆಕಲ್ ಗೊಲ್ಲರಹಟ್ಟಿ ಕಟ್ಟೆಯಲ್ಲಿ ನಡೆದ ರೋಜ್ಗಾರ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಗ್ರ ಅಭಿವೃದ್ಧಿ ಕಾಮಗಾರಿ ಕೂಲಿ ಉದ್ಯೋಗದ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆಗಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಅಕುಶಲ ದೈಹಿಕ ಕೆಲಸ ಮಾಡಲು ಇಚ್ಛಿಸುವ ಗ್ರಾಮೀಣ ಪ್ರದೇಶದ ವಯಸ್ಕರಿಗೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ ನೂರು ದಿನಗಳ ಉದ್ಯೋಗಾವಕಾಶಗಳನ್ನು ಸ್ಥಳೀಯವಾಗಿ ನೀಡಿ, ಬಡಜನರ ಬದುಕನ್ನು ಹಸನಾಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದ ಅವರು ಗ್ರಾಮೀಣ ಪ್ರದೇಶದಲ್ಲಿ ಬಡಜನರನ್ನು ತೊಡಗಿಸಿಕೊಂಡು ಕೃಷಿ ಕಾರ್ಮಿಕರಿಗೆ ಕೂಲಿ ನೀಡುವ ಉದ್ಯೋಗ, ಆಹಾರಭದ್ರತೆ, ದೀರ್ಘಕಾಲ ಬಾಳಿಕೆ ಬರುವಂತಹ ಸ್ವತ್ತುಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮೂಲಕ ಕೈಗೊಂಡು,ಕೂಲಿ ಕಾರ್ಮಿಕರಿಗೆ 309 ರೂಪಾಯಿ ಹಣ ನೀಡುವ ಮುಖಾಂತರ ಬಡ ಕೂಲಿ ಕಾರ್ಮಿಕರಿಗೆ ಸರ್ಕಾರ ನೆರವಾಗಿದೆ ಎಂದು ಅವರು ಶ್ಲಾಘಿಸಿದರು.
Bft ಜಯ ನಾಯಕ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಈರಣ್ಣ,ಮೂರ್ತಪ್ಪ, ಕರಿಯಪ್ಪ ಮತ್ತಿತರರು ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರುಗಳು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ