ಹುಳಿಯಾರು-ಕೆಂಕೆರೆಯ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “75ನೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ”ದ ಆಚರಣೆಯ ಅಂಗವಾಗಿ ಸಾಂಸ್ಕೃತಿಕ ವಿಭಾಗದ ವತಿಯಿಂದ "ದೇಶಭಕ್ತಿ ಗೀತೆ ಸ್ಪರ್ಧೆ"ಯನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಾಂಶುಪಾಲರಾದ ಪ್ರೊ. ವೀರಣ್ಣ ಎಸ್.ಸಿ. ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾ. ಮೋಹನ್ ಕುಮಾರ್ ಎಂ.ಜೆ. ಅವರು ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ ಕಾಲೇಜಿನಲ್ಲಿ ನಡೆಯುವ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ, ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವಕ್ಕೆ ಹೊಸ ಮೆರಗನ್ನು ಪಡೆಯಬಹುದು ಎಂಬ ಆಶಯವನ್ನು ವ್ಯಕ್ತಪಡಿಸಿದರು.
ನಂತರ ನಡೆದ "ದೇಶಭಕ್ತಿ ಗೀತೆ ಸ್ಪರ್ಧೆ"ಯಲ್ಲಿ ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಸೂಚಿಸುವ ಬಗೆಬಗೆಯ ಹಾಡುಗಳನ್ನು ಹಾಡಿದರು. ಕೆಲವು ವಿದ್ಯಾರ್ಥಿಗಳು ಹಿಂದಿ ದೇಶಭಕ್ತಿಗೀತೆಗಳನ್ನೂ ಹಾಡಿದರು. ಈ "ದೇಶಭಕ್ತಿ ಗೀತೆ" ಸ್ಪರ್ಧೆಯಲ್ಲಿ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ನಾಗರತ್ನ ವೈ.ಡಿ. ಪ್ರಥಮ ಸ್ಥಾನವನ್ನು , ದ್ವಿತೀಯ ಬಿ.ಕಾಂ. ವಿದ್ಯಾರ್ಥಿ ತರುಣ್ ಕುಮಾರ್ ಕೆ.ಎಂ. ದ್ವಿತೀಯ ಸ್ಥಾನವನ್ನು ಹಾಗೂ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ನೂರ್ ಜಹರಾ ಅವರು ತೃತೀಯ ಸ್ಥಾನವನ್ನು ಪಡೆದರು.
ಉಪನ್ಯಾಸಕರಾದ ಪ್ರೊ. ಸಂಗೀತ ಪಿ. ಮತ್ತು ಪ್ರೊ. ಮಂಜುನಾಥ ಕೆ.ಎಸ್. ಇವರು ಸ್ಪರ್ಧೆಯ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿನಿಯರಾದ ಚಂದನ ಕೆ.ಪಿ., ಮತ್ತು ಕಾವ್ಯ ಕೆ. ಇವರು ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ” ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅನಂತರ ಗಿಡಕ್ಕೆ ನೀರು ಹನಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಮಾರುತಿ ಎಚ್.ಆರ್. ಸ್ವಾಗತಿಸಿದರು. ಕೋಮಲ ಎನ್. ಕಾರ್ಯಕ್ರಮವನ್ನು ನಿರೂಪಿಸಿದರು. ರಕ್ಷಿತ ಕೆ. ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ