ಹುಳಿಯಾರು ಪಟ್ಟಣದ BH ರಸ್ತೆಯ ಅಕ್ಕಪಕ್ಕದಲ್ಲಿ, ಹೊಸದಾಗಿ ಹೆದ್ದಾರಿ ನಿರ್ಮಾಣ ಮಾಡಿರುವ ಸಮಯದಲ್ಲಿ ಒಳಚರಂಡಿಗಳ ಮೇಲ್ಬಾಗದಲ್ಲಿ ಸ್ಲಾಬ್ ಹಾಕದಿರುವುದು, ಅವೈಜ್ಞಾನಿಕ ಚರಂಡಿಗಳ ನಿರ್ಮಾಣದಿಂದಾಗಿ ಕೊಳಚೆ ನೀರು ಸರಿಯಾಗಿ ಹರಿಯದೆ, ಕೊಳಚೆ ನೀರು ನಿಂತು ಸೊಳ್ಳೆಗಳು ಹೆಚ್ಚಾಗಿ ರೋಗ ರುಜಿನಗಳು ಹೆಚ್ಚಾಗಲು ಕಾರಣವಾಗಿರುವುದು, ಸ್ವಚ್ಚತಾ ಕಾರ್ಯ ಸಮರ್ಪಕವಾಗಿ ನಡೆಯದಿರುವುದು.... ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಸರಿಪಡಿಸುವಂತೆ ಸರಿಪಡಿಸುವಂತೆ ಒತ್ತಾಯಿಸಿ ಹುಳಿಯಾರು ಪಟ್ಟಣದಲ್ಲಿ 10-8-22 ಬುಧವಾರ ಬೆಳಿಗ್ಗೆ 11.30ಕ್ಕೆ ಹುಳಿಯಾರಿನ ರಾಂಗೋಪಾಲ್ ವೃತ್ತದಲ್ಲಿ ರೈತಸಂಘ, ಕನ್ನಡ ಪರಸಂಘಟನೆಗಳು, ಮಹಿಳಾ ಸಂಘಟನೆಗಳು, ನಾನಾ ಸಂಘಸಂಸ್ಥೆಗಳ ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ, ಪ್ರತಿಭಟನಾಕಾರರ ಪರವಾಗಿ ರಾಜ್ಯರೈತಸಂಘದ ಅಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಹಾಗೂ ಹುಳಿಯಾರು ಜಿ.ಪಂ.ಮಾಜಿ ಸದಸ್ಯ ವೈಸಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ