ಹುಳಿಯಾರು:75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಅಂಗವಾಗಿ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಾವುಟವನ್ನು ವಿತರಿಸುವುದರ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಲಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರು ಆದ ಕೆ.ಎಸ್. ಕಿರಣ್ ಕುಮಾರ್ ಚಾಲನೆ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಕವಿತಾ ಕಿರಣ್ ಕುಮಾರ್ ಮಾತನಾಡಿ ಜನರಲ್ಲಿ ಸ್ವಾತಂತ್ರ್ಯ ಹಾಗೂ ದೇಶಾಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿಯವರ ಆಶಯದಂತೆ ಹರ್ ಘರ್ ತಿರಂಗ ಅಭಿಯಾನ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಮನೆಮನೆಯಲ್ಲೂ ಹಾರಿಸಲು ಬಾವುಟವನ್ನು ವಿತರಿಸಲಾಗಿದ್ದು ಪ್ರತಿಯೊಬ್ಬರು ನಾಳೆ ಆ.13ರಿಂದ ಆ.15ವರೆಗೆ ಮೂರು ದಿನಗಳ ಕಾಲ ಬಾವುಟವನ್ನು ಹಾರಿಸುವುದರ ಮೂಲಕ ಅಭಿಯಾನ ಯಶಸ್ವಿಗೊಳಿಸುವಂತೆ ಕರೆನೀಡಿದರು.ಈ ವೇಳೆ ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಹಾಜರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ