ಹುಳಿಯಾರು: ತಾಲೂಕು ಪಂಚಾಯಿತಿ ಚಿಕ್ಕನಾಯಕನಹಳ್ಳಿ ಹಾಗೂ ಗ್ರಾಮ ಪಂಚಾಯಿತಿ ಯಳನಾಡು ಇವರ ಸಂಯುಕ್ತಾಶ್ರಯದಲ್ಲಿ ಹುಳಿಯಾರು ಹೋಬಳಿಯ ಯಳನಾಡುವಿನಲ್ಲಿ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟದ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಯಳನಡು ಶಾಖೆಯ ಮೆನೇಜರ್ ರಕ್ಷಿತ್ ಸಂಘಗಳನ್ನು ಉದ್ದೇಶಿಸಿ ಮಾತನಾಡಿ ಸ್ವಸಹಾಯ ಸಂಘಗಳು ಬ್ಯಾಂಕಿನಿಂದ ಆರ್ಥಿಕ ಸಹಾಯವನ್ನು ಪಡೆದು ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಸಮಾಜ ಪರಿವರ್ತನೆಯಲ್ಲಿ ಬಹಳ ಮುಂದೆ ಸಾಗಿದ್ದಾರೆ ಎಂದರು.
ಯಳನಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗೀತಾರವರು ಸಂಘಗಳನ್ನು ಉದ್ದೇಶಿಸಿ ಮಾತನಾಡುತ್ತ ನಮ್ಮ ಪಂಚಾಯಿತಿಯು ಸಂಘಗಳಿಗೋಸ್ಕರ ಎಲ್ಲಾ ರೀತಿಯಲ್ಲೂ ಸಹಕಾರ ಕೊಡುವದಾಗಿ ತಿಳಿಸಿದರು.
ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಕನ್ಯಾಕುಮಾರಿ ಮಾತನಾಡಿ ಸಂಘಗಳಿಗೆ ಎಲ್ಲಾ ರೀತಿಯ ಸಹಕಾರ ಸೌಲಭ್ಯಗಳನ್ನು ಒದಗಿಸಲು ನಾವು ಸದಾಕಾಲ ನಿಮ್ಮ ಜೊತೆಯಲ್ಲಿ ಇರುತ್ತೇವೆ ಎಂದು ನುಡಿದರು.
ತಾಲ್ಲೂಕು ಪಂಚಾಯತಿಯ ಆರ್ಥಿಕ ಸೇರ್ಪಡೆ ವಿಭಾಗದ ಎನ್ ಆರ್ ಎಲ್ ಎಂ ವಿಭಾಗದ ಶಿವಶಂಕರ್ ಮಾತನಾಡಿ ಸಂಘಗಳು ಒಕ್ಕೂಟದ ಸಹಕಾರದಿಂದ ಆರ್ಥಿಕವಾಗಿ ಸಬಲರಾಗುವಂತೆ ತಿಳಿಸಿದರು.
ಇನ್ನೋರ್ವ ಅತಿಥಿಯಾದ ತಾಲೂಕ್ ಪಂಚಾಯತ್ ಸೇರ್ಪಡೆ ವಿಭಾಗದ ರಮೇಶ್ ಮಾತನಾಡಿ ಸಂಘಗಳು ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಸಾಲ ಪಡೆಯದೆ ಬ್ಯಾಂಕುಗಳು ಹಾಗೂ ಸಂಜೀವಿನಿ ಒಕ್ಕೂಟದ ಸಹಾಯದಿಂದ ಬ್ಯಾಂಕುಗಳ ಮುಖಾಂತರ ಸಾಲ ಪಡೆಯುವಂತೆ ಕಿವಿಮಾತು ಹೇಳಿದರು.
ಈ ಕಾರ್ಯಾಗಾರದಲ್ಲಿ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಲಹೆಗಾರರಾದ ಆರ್. ಎಂ. ಕುಮಾರಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಭಾಗ್ಯ, ಒಕ್ಕೂಟದ ಉಪಾಧ್ಯಕ್ಷರಾದ ಶ್ರೀಮತಿ ಯಶೋಧ ಮುಂತಾದವರು ಸಂಘಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಗಾರದಲ್ಲಿ ಶ್ರೀಮತಿ ಪಲ್ಲವಿ ಹಾಗೂ ಜ್ಯೋತಿ ಪ್ರಾರ್ಥಿಸಿ ಎಂಬಿಕೆ ಪರಿಮಳರವರು ಸ್ವಾಗತಿಸಿ ಶ್ರೀಮತಿ ಸ್ಪಂದನ ವಂದಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ