ಹುಳಿಯಾರಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಟ್ಟಣ ಪಂಚಾಯಿತಿ ಹುಳಿಯಾರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕೈತೊಳೆಯುವ ದಿನವನ್ನು ಆಚರಿಸಲಾಯಿತು.
ಹುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೆಂಕಟರಾಮಯ್ಯ ಮಾತನಾಡಿ ಕೈ ತೊಳೆದುಕೊಳ್ಳುವ ಬಗ್ಗೆ ಜನರಿಗೆ ಮನವರಿಕೆ ಮಾಡಿ ಜಾಗೃತಿ ಉಂಟುಮಾಡಿದ್ದರು.
ಮುಂದುವರೆದು ಮಾತನಾಡಿದ ಅವರು ಮಾನವನಿಗೆ ಬರುವ ಹಲವು ರೋಗಗಳಲ್ಲಿ ಕೈ ತೊಳೆಯದೆ ಆಹಾರ ಸೇವಿಸುವುದೇ ಕಾರಣ. ಕೈತೊಳೆಯದೆ ಆಹಾರ ಸ್ವೀಕರಿಸುವುದರಿಂದ ಅನೇಕ ವೈರಸ್ ಮತ್ತು ಬ್ಯಾಕ್ಟೀರಿಯಗಳು ನಮಗೆ ಗೊತ್ತಿಲ್ಲದಂತೆ ಬಾಯಿಯ ಮೂಲಕ ದೇಹಕ್ಕೆ ಸೇರಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕೈ ತೊಳೆಯುವುದು ಹಾಗೂ ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯ ಈ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಕೈ ತೊಳೆಯುವ ದಿನ ಆಚರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೈ ತೊಳೆಯುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷತೆ ಮಾಡಿ ತೋರಿಸಲಾಯಿತು ನೌಕರರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಭೂತಪ್ಪ ಕಂದಾಯ ಅಧಿಕಾರಿ ಪ್ರದೀಪ್, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗಣೇಶ್ ಸೇರಿದಂತೆ ಹಲವರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ