ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ : ಸ್ಥಳೀಯರಿಗಷ್ಟೇ ಕಾಂಗ್ರೆಸ್ ಪಕ್ಷದ ಟಿಕೆಟನ್ನು ನೀಡಲಿ

ಹುಳಿಯಾರು : ಈ ಬಾರಿಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಾದ ಕ್ಷೇತ್ರದವರಿಗೆ ಮಾತ್ರವೇ ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು  ಒತ್ತಾಯಿಸಿದ್ದಾರೆ. ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯ ಎಸ್. ಆರ್.ಎಸ್ ದಯಾನಂದ್ ಅವರ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಈಗಾಗಲೇ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ಚುನಾವಣೆಯಿಂದಲೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾನಾ ಕಾರಣಗಳಿಂದ ಹೊರಗಿನವರಿಗೆ ಟಿಕೆಟ್ ಕೊಡುವ ಸಂಸ್ಕೃತಿ ನಡೆಯುತ್ತಿದ್ದು ,ಈ ಚುನಾವಣೆಯಲ್ಲಿ ವಲಸಿಗರಿಗೆ /ಹೊರಗಿನವರಿಗೆ ಮಣೆ ಹಾಕುವ ಬದಲು ಕಾಂಗ್ರೆಸ್ ಪಕ್ಷ ಮತ್ತು ಸಿದ್ಧಾಂತಕ್ಕೆ ನಿಷ್ಟರಾಗಿರುವ, ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ಹೋರಾಟ ಮನೋಭಾವ ಹೊಂದಿರುವ ಸಮರ್ಥರಾದ ಸ್ಥಳೀಯ ಅಭ್ಯರ್ಥಿಗಳಿಗಷ್ಟೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದರೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಮಾತ್ರ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯ . ಈಗಾಗಲೇ ಚಿಕ್ಕನಾಯಕನಹಳ್ಳಿ

ಹುಳಿಯಾರಿನ ಬಿ.ಎಂ.ಎಸ್. ಪದವಿ ಕಾಲೇಜಿನಲ್ಲಿ "ಕನ್ನಡ ಗೀತೆಗಳ ಗಾಯನ ಸ್ಪರ್ಧೆ"

ಹುಳಿಯಾರು :67ನೇಯ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ "ಕನ್ನಡ ಗೀತೆಗಳ ಗಾಯನ ಸ್ಪರ್ಧೆ" ಯನ್ನು ಏರ್ಪಡಿಸಲಾಗಿತ್ತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮೋಹನ್ ಕುಮಾರ್ ಮಿರ್ಲೆ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು "ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಗೆಲ್ಲುವುದೇ ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ, ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಇಂತಹ ಸ್ಪರ್ಧೆಗಳು ಸಹಕಾರಿ" ಎಂದು ಅಭಿಪ್ರಾಯಪಟ್ಟರು.  ಸ್ಪರ್ಧೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಸುಹಾನಾ ಬಿ. ಪ್ರಥಮ ಸ್ಥಾನ, ಅರ್ಚನಾ ಟಿ. ದ್ವಿತೀಯ ಸ್ಥಾನ ಮತ್ತು ಐಶ್ವರ್ಯ ಕೆ.ಎಂ. ತೃತೀಯ ಸ್ಥಾನ ಗಳಿಸಿದರು.  ಕನ್ನಡ ಉಪನ್ಯಾಸಕರಾದ ಶ್ರೀ ಹೊನ್ನಪ್ಪ ಕೆ.ಎಸ್. ಸ್ವಾಗತಿಸಿದರು. ಮತ್ತೊಬ್ಬರು ಕನ್ನಡ ಉಪನ್ಯಾಸಕರಾದ ಶ್ರೀ ಚಂದ್ರಹಾಸ ಬಿ.ಆರ್. ನಿರೂಪಿಸಿದರು. ತೀರ್ಪುಗಾರರಾಗಿ ಡಾ. ಮೋಹನ್ ಕುಮಾರ್ ಮಿರ್ಲೆ, ಡಾ. ಜಯಶ್ರೀ ಬಿ. ಕದ್ರಿ ಹಾಗೂ ಪ್ರೊ. ಮಂಜುನಾಥ್ ಕೆ.ಎಸ್. ಕರ್ತವ್ಯ ನಿರ್ವಹಿಸಿದರು.  ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರುಗಳಾದ ಪ್ರೊ. ಸಂಗೀತ ಪಿ., ಶ್ರೀಮತಿ ಲಾವಣ್ಯ ಪಿ.ಸಿ., ಶ್ರೀ ಕುಮಾ