ಹುಳಿಯಾರು:67ನೇಯ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ "ಕನ್ನಡ ಗೀತೆಗಳ ಗಾಯನ ಸ್ಪರ್ಧೆ"ಯನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮೋಹನ್ ಕುಮಾರ್ ಮಿರ್ಲೆ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು "ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಗೆಲ್ಲುವುದೇ ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ, ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಇಂತಹ ಸ್ಪರ್ಧೆಗಳು ಸಹಕಾರಿ" ಎಂದು ಅಭಿಪ್ರಾಯಪಟ್ಟರು. ಸ್ಪರ್ಧೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಸುಹಾನಾ ಬಿ. ಪ್ರಥಮ ಸ್ಥಾನ, ಅರ್ಚನಾ ಟಿ. ದ್ವಿತೀಯ ಸ್ಥಾನ ಮತ್ತು ಐಶ್ವರ್ಯ ಕೆ.ಎಂ. ತೃತೀಯ ಸ್ಥಾನ ಗಳಿಸಿದರು. ಕನ್ನಡ ಉಪನ್ಯಾಸಕರಾದ ಶ್ರೀ ಹೊನ್ನಪ್ಪ ಕೆ.ಎಸ್. ಸ್ವಾಗತಿಸಿದರು. ಮತ್ತೊಬ್ಬರು ಕನ್ನಡ ಉಪನ್ಯಾಸಕರಾದ ಶ್ರೀ ಚಂದ್ರಹಾಸ ಬಿ.ಆರ್. ನಿರೂಪಿಸಿದರು. ತೀರ್ಪುಗಾರರಾಗಿ ಡಾ. ಮೋಹನ್ ಕುಮಾರ್ ಮಿರ್ಲೆ, ಡಾ. ಜಯಶ್ರೀ ಬಿ. ಕದ್ರಿ ಹಾಗೂ ಪ್ರೊ. ಮಂಜುನಾಥ್ ಕೆ.ಎಸ್. ಕರ್ತವ್ಯ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರುಗಳಾದ ಪ್ರೊ. ಸಂಗೀತ ಪಿ., ಶ್ರೀಮತಿ ಲಾವಣ್ಯ ಪಿ.ಸಿ., ಶ್ರೀ ಕುಮಾರಸ್ವಾಮಿ ಕೆ.ಸಿ., ಶ್ರೀ ಜಯಪ್ರಕಾಶ್ ಕೆ., ಶ್ರೀ ಶಂಕರ್ ಕೆ.ಎಂ. ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ