ವಿಷಯಕ್ಕೆ ಹೋಗಿ

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ : ಸ್ಥಳೀಯರಿಗಷ್ಟೇ ಕಾಂಗ್ರೆಸ್ ಪಕ್ಷದ ಟಿಕೆಟನ್ನು ನೀಡಲಿ

ಹುಳಿಯಾರು: ಈ ಬಾರಿಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಾದ ಕ್ಷೇತ್ರದವರಿಗೆ ಮಾತ್ರವೇ ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು  ಒತ್ತಾಯಿಸಿದ್ದಾರೆ.
ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯ ಎಸ್. ಆರ್.ಎಸ್ ದಯಾನಂದ್ ಅವರ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಈಗಾಗಲೇ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ಚುನಾವಣೆಯಿಂದಲೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾನಾ ಕಾರಣಗಳಿಂದ ಹೊರಗಿನವರಿಗೆ ಟಿಕೆಟ್ ಕೊಡುವ ಸಂಸ್ಕೃತಿ ನಡೆಯುತ್ತಿದ್ದು ,ಈ ಚುನಾವಣೆಯಲ್ಲಿ ವಲಸಿಗರಿಗೆ /ಹೊರಗಿನವರಿಗೆ ಮಣೆ ಹಾಕುವ ಬದಲು ಕಾಂಗ್ರೆಸ್ ಪಕ್ಷ ಮತ್ತು ಸಿದ್ಧಾಂತಕ್ಕೆ ನಿಷ್ಟರಾಗಿರುವ, ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ಹೋರಾಟ ಮನೋಭಾವ ಹೊಂದಿರುವ ಸಮರ್ಥರಾದ ಸ್ಥಳೀಯ ಅಭ್ಯರ್ಥಿಗಳಿಗಷ್ಟೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದರೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಮಾತ್ರ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯ. ಈಗಾಗಲೇ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದ್ದು ಗೆಲ್ಲುವ ಅವಕಾಶ ಹೆಚ್ಚಿದೆ.ಹಾಗಾಗಿ ಕ್ಷೇತ್ರದ ತಾಲೂಕುಗಳ ಪರಿಸ್ಥಿತಿ ಅರಿವಿರುವ, ಕಾರ್ಯಕರ್ತರ ಮತ್ತು ಮತದಾರರ ಕಷ್ಟ ಸುಖಗಳಿಗೆ ಭಾಗಿಯಾಗುವ ಸ್ಥಳೀಯ ವ್ಯಕ್ತಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ಅವರುಗಳು ಆಗ್ರಹಿಸಿದ್ದಾರೆ.
ತಳಮಟ್ಟದಿಂದಲೂ ಕಾಂಗ್ರೆಸ್ ಪಕ್ಷಕ್ಕೆ ದುಡಿದು, ಕಾಂಗ್ರೆಸ್ ಬೆಳವಣಿಗೆಗೆ ಸಹಕರಿಸುವ ಸ್ಥಳೀಯ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಪಕ್ಷದ ಬಿ.ಫಾರಂ ನೀಡಬೇಕು.ಸ್ಥಳೀಯರು ಕೂಡ ಚುನಾವಣೆ ಎದುರಿಸಲು ಎಲ್ಲಾ ರೀತಿಯಲ್ಲೂ ಸದೃಢರಾಗಿದ್ದು ಅವರನ್ನು ಗುರುತಿಸಿ ಟಿಕೆಟ್ ನೀಡುವ ಮೂಲಕ ಪಕ್ಷದ ಗೆಲುವಿಗೆ ಮುಂದಾಗಬೇಕು.ಹೊರಗಿನ ವ್ಯಕ್ತಿಗಳಿಗೆ ಟಿಕೆಟ್ ನೀಡಿದಲ್ಲಿ ಸ್ಥಳೀಯರ ವಿರೋಧ ಹೆಚ್ಚಾಗಲಿದೆ, ಬೇರೆ ಪಕ್ಷಗಳ ಗೆಲುವಿನ ಹಾದಿಯನ್ನು ಸುಗಮಗೊಳಿಸಿದಂತಾಗುತ್ತದೆ ಎಂದಿದ್ದಾರೆ.
ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಲವಾರು ಮಂದಿ ಆಕಾಂಕ್ಷಿಗಳಿದ್ದಾರೆ. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಸಿ. ಸಿದ್ದರಾಮಯ್ಯ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ದಿವಂಗತ ಹೊನ್ನಪ್ಪನವರ ಮಗ ಹೊಸಳ್ಳಿ ಅಶೋಕ್, ಚಿಕ್ಕನಾಯಕನಹಳ್ಳಿಯ ಮಾಜಿ ಶಾಸಕರಾದ ಲಕ್ಕಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಂದನಕೆರೆ ರಘುನಾಥ್ ಸೇರಿದಂತೆ ಹಲವಾರು ಮಂದಿಯಿದ್ದು, ಸೂಕ್ತ ವ್ಯಕ್ತಿಗೆ ಟಿಕೆಟ್ ನೀಡಬೇಕೆಂದು ಅವರುಗಳು ಒತ್ತಾಯಿಸಿದ್ದಾರೆ.
ಈ ಕ್ಷೇತ್ರದಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಪ್ರಾಬಲ್ಯವಿತ್ತು. ಆದರೆ ಈ ಹಿಂದೆ ರೇಣುಕಾ ಪ್ರಸಾದ್ ಎಂಬ ವಲಸಿಗರಿಗೆ ಟಿಕೆಟ್ ನೀಡಿದ ಕಾಂಗ್ರೆಸ್ ಪಕ್ಷ ಕೇವಲ 4000 ಮತಗಳಿಸಲಷ್ಟೇ ಶಕ್ತವಾಗಿ ಸೋಲು ಅನುಭವಿಸುವಂತಹಾಯಿತು, ಆದರೆ ಕಳೆದ ಚುನಾವಣೆಯಲ್ಲಿ ಸಂತೋಷ್ ಅವರಿಗೆ ಟಿಕೆಟ್ ನೀಡಿದಾಗ 47,000 ಮತಗಳಿಸಲು ಸಾಧ್ಯವಾಗಿದ್ದನ್ನು, ಹಾಗೂ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಸೋಲು ಅನುಭವಿಸಿರುವುದನ್ನು  ಮನದಟ್ಟು ಮಾಡಿಕೊಂಡು, ವಲಸಿಗರಿಗೆ ಟಿಕೆಟ್ ಕೊಡುವ ಸಂಸ್ಕೃತಿ ಕೈ ಬಿಡಬೇಕು ಎಂದಿದ್ದಾರೆ.

       ಕ್ಷೇತ್ರದಲ್ಲಿ ಬೆಂಗಳೂರು/ಹೊಸಕೋಟೆಯವರು ತಮ್ಮ ಫ್ಲೆಕ್ಸ್‌ಗಳನ್ನು ಹಾಕಿಕೊಳ್ಳುವ ಮೂಲಕ ತಾವು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಎಂದು ಪ್ರಚಾರ ಮಾಡಿಕೊಳ್ಳುತ್ತಿರುವುದು,ಈ ಬಾರಿಯೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ವಲಸಿಗರಿಗೇ ಟಿಕೆಟ್ ಎಂಬ ಗೊಂದಲಕ್ಕೆ ಕಾರಣವಾಗುತ್ತಿದೆ. ಇದರಿಂದಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಥಳೀಯರಲ್ಲಿ ಸಮರ್ಥರ‌್ಯಾರು ಕಂಡೆ ಇಲ್ಲವೇ ಎಂದು ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗುತ್ತಿದೆ. ಹಾಗಾಗಿ ಪಕ್ಷದ ನಾಯಕರುಗಳು ಈಗಲೇ ಎಚ್ಚೆತ್ತುಕೊಂಡು ವಲಸಿಗರಿಗೆ ಮನ್ನಣೆ ಕೊಡುವ ಬದಲು ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಎಸ್ ಆರ್ ಎಸ್ ದಯಾನಂದ್, ಸೈಯದ್ ಜಹೀರ್, ಅಬೂಬಕ್ಕರ್ ಸಿದ್ದಿಕ್, ಮಹಮ್ಮದ್ ಜುಬೇರ್, ಕೆಂಕೆರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಟಿಎನ್ ಮಂಜುನಾಥ್‌, ಮಾಜಿ ಗ್ರಾಮ ಪಂಚಾಯತಿ ಸದಸ್ಯ ತರಕಾರಿ ರಾಮಣ್ಣ,ರಹಮತ್ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.