ಹುಳಿಯಾರಿನ ವಾಸವಿ ವಿದ್ಯಾಸಂಸ್ಥೆಯ MAG Nursery, Vasavi English HPS,Vasavi English High School, T.R.S.R. High School ವಿಭಾಗಗಳಿಂದ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಇಂದು ಜನವರಿ 18 ಹಾಗೂ ನಾಳೆ ಜನವರಿ 19 ರಂದು ಶಾಲಾ ಆವರಣದಲ್ಲಿ VASAVI ANNUAL UTSAV-2023( ವಾಸವಿ ವಾರ್ಷಿಕೋತ್ಸವ-2023) ಹಮ್ಮಿಕೊಳ್ಳಲಾಗಿದೆ.ಸಂಜೆ ಆರು ಗಂಟೆಗೆ ಉದ್ಘಾಟನಾ ಸಮಾರಂಭ, ನಂತರ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ, ತದನಂತರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ರಾಜ್ಯಮಟ್ಟದ ಕ್ರೀಡೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಗುವುದು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ