ಹುಳಿಯಾರು :ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸದ ಪಾತ್ರ ಎಂಬ ವಿಷಯ ಕುರಿತು ಹುಳಿಯಾರಿನ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಪಾವಗಡದ ವೈ.ಈ.ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಲಿಂಗರಾಜು.ಪಿ ಮಾತನಾಡಿ "ವಿದ್ಯಾಭ್ಯಾಸಕ್ಕೆ ಸಾಮಾನ್ಯವಾಗಿ ಹಲವು ತೊಡಕುಗಳು ಎದುರಾಗುತ್ತವೆ, ಆದರೆ ಛಲ ಹೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು" ಎಂದರು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವವರು ಕಡ್ಡಾಯವಾಗಿ ಅನುಸರಿಸಬೇಕಾದ ಅಂಶಗಳನ್ನು ತಿಳಿಸಿದರು. "ಮೊದಲು ನಾವು ತಯಾರಾಗಬೇಕಾದ ಪರೀಕ್ಷೆಯನ್ನು ಗುರುತು ಮಾಡಿಕೊಳ್ಳಬೇಕು, ನಂತರ ಪಠ್ಯಕ್ರಮವನ್ನು ಅಧ್ಯಯನ ಮಾಡಬೇಕು.ಅನಂತರದಲ್ಲಿ ಅಧ್ಯಯನ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಳ್ಳುವುದು, ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರು ಮಾಡಿಕೊಳ್ಳುವುದು, ಓದಿದ್ದನ್ನು ಪುನರ್ ಅವಲೋಕನ ಮಾಡುವುದು ಹಾಗೂ ಸ್ವಯಂ ಮೌಲ್ಯಮಾಪನ ಅತ್ಯಗತ್ಯ ಎಂದರು. ಓದಿದ್ದನ್ನು ಕ್ರಮಬದ್ಧಗೊಳಿಸಲು A4 ಶೀಟ್ ಗಳಲ್ಲಿ ಕೀ ನೋಟ್ಸ್ ಮಾಡುವ ಮೂಲಕ ಒಂದು ಫೈಲ್ ತಯಾರು ಮಾಡಿಕೊಳ್ಳುವುದು ಅತ್ಯಗತ್ಯ ಎಂದರಲ್ಲದೇ ಇನ್ನೂ ಅನೇಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070