ABVP ಹುಳಿಯಾರು ವತಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಉಪತಹಸಿಲ್ದಾರ್ ಮುಖಾಂತರ ಮನವಿ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ವತಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಸೋರಿಕೆ ಮಾಡಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪತಹಶೀಲ್ದಾರ್ ಹುಳಿಯಾರು ಇವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರು ತುಮಕೂರು ಇವರಿಗೆ ಮನವಿ ಸಲ್ಲಿಸಲಾಯಿತು.
ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ಬಹುತೇಕ ಎಲ್ಲಾ ಪರೀಕ್ಷೆಗಳನ್ನು ನಿರ್ಲಕ್ಷಯುತವಾಗಿ ಮಾಡುತ್ತಿರುವುದು ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳ ಬೇಜವಾಬ್ದಾರಿಯನ್ನು ತೋರಿಸುತ್ತಿದೆ. ಆದ್ದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಕಳೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ವರ್ಷ ಪೂರ್ತಿ ಕಷ್ಟಪಟ್ಟು ಓದುವಂತಹ ವಿದ್ಯಾರ್ಥಿಗಳಲ್ಲಿ ದುಃಖ ಮತ್ತು ಭಯದ ವಾತಾವರಣ ಮನೆ ಮಾಡಿದೆ.ಹೀಗಾಗಿ ಮುಂದೆ ನಡೆಯುವ ಎಲ್ಲಾ ಪ್ರಶ್ನೆ ಪತ್ರಿಕೆಗಳನ್ನು ಬದಲಾವಣೆ ಮಾಡಿ ಮುಂದೆ ನಡೆಯುವ ಎಲ್ಲಾ ಪರೀಕ್ಷೆಯನ್ನು ಯಾವೊಂದೂ ವಿದ್ಯಾರ್ಥಿಗೂ ಅನ್ಯಾಯವಾಗದಂತೆ, ಈ ರೀತಿಯ ಕಾನೂನುಬಾಹೀರ ಚಟುವಟಿಕೆಯಲ್ಲಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡ ಎಲ್ಲಾ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಎಚ್.ಆರ್ ಗುರುಪ್ರಸಾದ್, ಚಿಕ್ಕನಾಯಕನಹಳ್ಳಿ ಮಾಧ್ಯಮ ಪ್ರಮುಖ್ ದೀಪಕ್.ಕೆ, ಸಿದ್ದೇಶ್ ವೈ.ಕೆ., ಕಾಲೇಜ್ ಪ್ರಮುಖ್ ಭರತ್ ಎಂ.ಎಲ್ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ