ಛತ್ರಿ ವಿತರಿಸಿ ಮಾತನಾಡಿದ ಮಾಜಿ ಶಾಸಕ ಸಿ.ಬಿ. ಸುರೇಶ್ ಬಾಬು ದಿನೇ ದಿನೇ ಬಿಸಿಲಿನ ತಾಪಮಾನ ಏರುತ್ತಿದ್ದು, ಬಸ್ ನಿಲ್ದಾಣದ ಫುಟ್ಪಾತ್ ವ್ಯಾಪಾರಿಗಳಿ ಬಿಸಿಲಿನಿಂದ ಯಾವುದೇ ರಕ್ಷಣೆ ಇಲ್ಲದಿರುವ ಹಿನ್ನೆಲೆಯಲ್ಲಿ, ಆರೋಗ್ಯ ಕಾಪಾಡಿಕೊಳ್ಳಲಿ ಎನ್ನುವ ಉದ್ದೇಶದಿಂದ ಹುಳಿಯಾರಿನ ಐವತ್ತಕ್ಕೂ ಹೆಚ್ಚು ಹೂವು-ಹಣ್ಣು-ತರಕಾರಿ- ಎಲೆ ಅಡಿಕೆ ಮಾರುವ ವ್ಯಾಪಾರಿಗಳಿಗೆ ಛತ್ರಿ ವಿತರಿಸಲಾಗುತ್ತಿದ್ದು, ಉಳಿದಿರುವ ವ್ಯಾಪಾರಿಗಳ ಪಟ್ಟಿ ಮಾಡಿದಲ್ಲಿ ಅವರಿಗೂ ಸಹ ಛತ್ರಿ ವಿತರಿಸಲಾಗುವುದು ಎಂದರು.ಹುಳಿಯಾರು ಪಟ್ಟಣ ಪಂಚಾಯಿತಿಯಿಂದ ಫುಟ್ಪಾತ್ ವ್ಯಾಪಾರಿಗಳನ್ನು ಆಗಾಗ್ಗೆ ತೆರವು ಮಾಡಿಸುವ ಕ್ರಮಕ್ಕೆ ಮುಂದಾಗುತ್ತಿರುವುದನ್ನು ಖಂಡಿಸಿದ ಅವರು ಕರೋನಾ ಸಮಯದಿಂದ ಫುಟ್ಪಾತ್ ವ್ಯಾಪಾರಿಗಳ ಜೀವನ ಸ್ಥಿತಿ ಶೋಚನೀಯವಾಗಿದ್ದು, ಪ್ರತಿದಿನ ದುಡಿದೇ ಜೀವನ ಸಾಕಾಗಿಸಬೇಕಾಗಿರುವ ಅವರುಗಳಿಗೆ ಪಟ್ಟಣ ಪಂಚಾಯಿತಿಯಿಂದ ಅನುಕೂಲ ಕಲ್ಪಿಸಬೇಕೆ ಹೊರತು ಒಕ್ಕಲಿಬ್ಬಿಸುವುದು ತರವಲ್ಲ ಎಂದರು. ಪಟ್ಟಣ ಪಂಚಾಯಿತಿ ಅಧಿಕಾರಿಗಳು ತೆರವು ಮಾಡಿಸಲು ಮುಂದಾದಲ್ಲಿ ಯಾವುದೇ ಭಯವಿಲ್ಲದೆ ತೆರವು ಮಾಡುವುದು ಸಾಧ್ಯವಿಲ್ಲ ಎನ್ನೀರಿ ಎಂದು ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಹೊನ್ನೇಬಾಗಿ ಶಶಿಧರ್,ನಾಗರಾಜು ಎಂಬಿ,ಸೈಯದ್ ಜಹೀರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರಾಮಚಂದ್ರಪ್ಪ,ದಬ್ಬಗುಂಟೆ ರವಿಕುಮಾರ್, ಹುಳಿಯಾರು ಜೆಡಿಎಸ್ ಘಟಕದ ಅಧ್ಯಕ್ಷ ರಾಘವೇಂದ್ರ, ನಂದಿಹಳ್ಳಿ ದೇವರಾಜು, ಕಿರುತೆರೆ ಕಲಾವಿದ ಗೌಡಿ, ಪಟ್ಟಣ ಪಂಚಾಯಿತಿ ಸದಸ್ಯರಾದ ದಯಾನಂದ್,ಮಂಜುನಾಥ್, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ,ಅಹಮದ್ ಖಾನ್ ,ಫುಟ್ಪಾತ್ ವ್ಯಾಪಾರಿಗಳ ಸಂಘದ ಅಧ್ಯಕ್ಷ ಬಸವರಾಜು, ದಲಿತ ಸಹಾಯವಾಣಿಯ ಹನುಮಂತಪ್ಪ ಸೇರಿದಂತೆ ಜೆಡಿಎಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ