ಹುಳಿಯಾರಿನ ವಿದ್ಯಾವಾರಿಧಿ ಇಂಡಿಪೆಂಡೆಂಟ್ ಪದವಿ ಪೂರ್ವ ಕಾಲೇಜು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇ 100% ಫಲಿತಾಂಶ ಪಡೆದಿದ್ದು, ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಗಾನವಿ ಹಾಗೂ ಕುಮಾರಿ ಸೃಷ್ಟಿ ಸಮನಾಗಿ 600 ಕ್ಕೆ 574 ಅಂಕಗಳನ್ನು ಪಡೆದು ಕಾಲೇಜಿಗೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ತೆರ್ಗಡೆ ಹೊಂದಿರುತ್ತಾರೆ.
ಕಾಲೇಜಿನಲ್ಲಿ 49 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದಿದ್ದು, 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಸದರಿ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಕಿರಣ್ ಕುಮಾರ್‌ರವರು ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಕವಿತಾ ಕಿರಣ್ ಕುಮಾರ್‌ರವರು,ಪ್ರಾಂಶುಪಾಲರು, ಉಪನ್ಯಾಸಕ ಮಿತ್ರರೂ ಶುಭ ಹಾರೈಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ