ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ, ಹುಳಿಯಾರು ಕೆಂಕೆರೆ ಪದವಿ ಪೂರ್ವ ಕಾಲೇಜಿನ ಮೂರು ವಿಭಾಗಗಳ ಒಟ್ಟು 282 ವಿದ್ಯಾರ್ಥಿಗಳ ಪೈಕಿ 269 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡವಾರು ಫಲಿತಾಂಶ 95.39 ಲಭ್ಯವಾಗಿದೆ.
ವಿಜ್ಞಾನ ವಿಭಾಗದ 83 ವಿದ್ಯಾರ್ಥಿಗಳ ಪೈಕಿ 81 ಮಂದಿ ಉತ್ತೀರ್ಣರಾಗಿದ್ದು, 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 57 ವಿದ್ಯಾರ್ಥಿಗಳ ಪ್ರಥಮ ದರ್ಜೆಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಹೆಗ್ಗೆರೆಯ ವಿದ್ಯಾರ್ಥಿನಿ ಲಕ್ಷ್ಮಿ 559 ಅಂಕಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ವಾಣಿಜ್ಯ ವಿಭಾಗದ 90 ವಿದ್ಯಾರ್ಥಿಗಳ ಪೈಕಿ 88 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,10 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 54 ವಿದ್ಯಾರ್ಥಿಗಳು ಪ್ರಥಮ ದರ್ಜೆ, 19 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 5 ಮಂದಿ ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣೇಶ್ ಕೆ.ಆರ್. 557 ಅಂಕಗಳಿಸುವ ಮೂಲಕ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾವಿಭಾಗದ 109 ವಿದ್ಯಾರ್ಥಿಗಳ ಪೈಕಿ 100 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,62 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 8 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಜಯಕುಮಾರ್ 554 ಅಂಕ ಗಳಿಸುವ ಮೂಲಕ ಕಲಾವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾರೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ