ಹುಳಿಯಾರು: ಜಿಲ್ಲಾ ಸ್ವೀಪ್ ಸಮಿತಿ, ವಿಕಲಚೇತನರ ಕಲ್ಯಾಣ ಇಲಾಖೆ ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಸುಮಾರು 30ಕ್ಕೂ ಹೆಚ್ಚು ವಿಶೇಷ ಚೇತನರಿಂದ ತ್ರಿಚಕ್ರ ವಾಹನಗಳಲ್ಲಿ ಪಟ್ಟಣದ ವಾರ್ಡ್ಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಜಾಥ ನಡೆಸುವುದರ ಮುಖಾಂತರ ಮತದಾನ ಜಾಗೃತಿ ಮೂಡಿಸಲಾಯಿತು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸ್ಥಳದಿಂದ ಆರಂಭವಾದ ಅಭಿಯಾನಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೂತಪ್ಪ ಚಾಲನೆ ನೀಡಿ ಮಾತನಾಡಿದರು.ಮತದಾನದ ಪ್ರಮಾಣವನ್ನು ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.ಪ್ರತಿಯೊಬ್ಬ ಅರ್ಹ ಮತದಾರರು ಮತ ಚಲಾವಣೆ ಮಾಡುವ ಮೂಲಕ ತಮ್ಮ ಸಂವಿಧಾನಬದ್ಧ ಹಕ್ಕು ಚಲಾಯಿಸಬೇಕು ಎಂದು ತಿಳಿಸಿದರು.
ಮತದಾನದ ಮಹತ್ವ ಕುರಿತು ಘೋಷಣೆ ಕೂಗುತ್ತಾ ಸಾಗಿದ ಮೆರವಣಿಗೆ ರಾಮ್ ಗೋಪಾಲ್ ಸರ್ಕಲ್, ಬಿಹಚ್ ರಸ್ತೆ, ರಾಜಕುಮಾರ್ ರಸ್ತೆ ,ಕನಕದಾಸ ಸರ್ಕಲ್, ಬಸ್ ಸ್ಟ್ಯಾಂಡ್ ,ವಿವೇಕಾನಂದ ರಸ್ತೆ ,ಪೇಟೆಬೀದಿ ಮೂಲಕ ಸಾಗಿ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು.
ಈ ವೇಳೆ ಪಟ್ಟಣ ಪಂಚಾಯಿತಿ ಇಂಜಿನಿಯರ್ ಮಂಜುನಾಥ್, ಬೂತ್ ಮಟ್ಟದ ಅಧಿಕಾರಿಗಳಾದ ಆನಂದ್, ಪೂರ್ಣಮ್ಮ, ರಾಜಣ್ಣ,ಸರಸ್ವತಮ್ಮ, ಮಂಜುಳಾ, ರಾಘವೇಂದ್ರ ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ