ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ಘಟಕದಿಂದ ಮನವಿ
ಹುಳಿಯಾರು:ಸರ್ಕಾರದ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ಇದರಿಂದಾಗಿ ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ಘಟಕದಿಂದ ಮೂರು ಘಟಕದ ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳಿಗೆ ಹುಳಿಯರು ನಾಡಕಚೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು . ಮನವಿಯಲ್ಲಿ ಏನಿದೆ ? : ಇದೇ ಜೂನ್ ತಿಂಗಳಿನಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಜರಾಗಬೇಕಾಗುತ್ತಿದೆ. ವಿದ್ಯಾರ್ಥಿಗಳು ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ. ಏಕೆಂದರೇ ಕರ್ನಾಟಕದಲ್ಲಿ ನೂತನ ಸರ್ಕಾರವು "ಶಕ್ತಿ ಯೋಜನೆ" ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಘೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಾಗಿ ಶಾಲಾ- ಕಾಲೇಜುಗಳಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕಷ್ಟದ ಪರಿಸ್ಥಿತಿಯನ್ನುಂಟು ಮಾಡಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಮರ್ಪಕವಾಗಿ ಎಷ್ಟು ಸಂಖ್ಯೆಯಲ್ಲಿ ಬಸ್ಸಿನ ಸಂಖ್ಯೆ ಬೇಕೂ ಅಷ್ಟು ಸಂಖ್ಯೆಯಲ್ಲಿ ಬಸ್ಸ...