ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ಘಟಕದಿಂದ ಮನವಿ
ಮನವಿಯಲ್ಲಿ ಏನಿದೆ ?: ಇದೇ ಜೂನ್ ತಿಂಗಳಿನಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಜರಾಗಬೇಕಾಗುತ್ತಿದೆ. ವಿದ್ಯಾರ್ಥಿಗಳು ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ.
ಏಕೆಂದರೇ ಕರ್ನಾಟಕದಲ್ಲಿ ನೂತನ ಸರ್ಕಾರವು "ಶಕ್ತಿ ಯೋಜನೆ" ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಘೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಾಗಿ ಶಾಲಾ- ಕಾಲೇಜುಗಳಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ.
ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕಷ್ಟದ ಪರಿಸ್ಥಿತಿಯನ್ನುಂಟು ಮಾಡಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಮರ್ಪಕವಾಗಿ ಎಷ್ಟು ಸಂಖ್ಯೆಯಲ್ಲಿ ಬಸ್ಸಿನ ಸಂಖ್ಯೆ ಬೇಕೂ ಅಷ್ಟು ಸಂಖ್ಯೆಯಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಸ್ಸಿನ ಸಮಸ್ಯೆಯಿಂದಾಗಿ ಕಳೆದ ದಿನಗಳ ಹಿಂದೆ ಹಾವೇರಿಯಲ್ಲಿ ವಿದ್ಯಾರ್ಥಿನಿಗೆ ಬಸ್ಸನ್ನು ಹತ್ತಲು ಹೋದಾಗ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಕೊಡಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಟ್ಟಿರುವ ಹಾಗೆ ಮುಂದಿನ ಯೋಜನೆಗಳಲ್ಲಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರುವತಿಯಿಂದ ವಿದ್ಯಾರ್ಥಿಗಳ ಪರವಾಗಿ ಮನವಿ ಸಲ್ಲಿಸಿದ್ದಾರೆ.
ಸ್ನಾತಕ ಪದವಿ, ಸ್ನಾತಕೋತ್ತರ ಪದವಿಯ ೨೦೨೨-೨೦೨೩ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಅವಧಿಯು ಸೆಪ್ಟೆಂಬರ್ ತಿಂಗಳಲ್ಲಿ ಮುಗಿಯಲಿದ್ದು ಬಸ್ ಪಾಸ್ ಅವಧಿ ಜುಲೈ ತಿಂಗಳಲ್ಲಿ ಮುಗಿಯಲಿದೆ ಶೈಕ್ಷಣಿಕ ವೇಳಾಪಟ್ಟಿ ಮುಗಿಯುವವರೆಗೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಈ ವೇಳೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರು ಪ್ರಸಾದ್, ತಾಲೂಕು ಸಂಚಾಲಕರಾದ ದೀಪಕ್ , ಹುಳಿಯಾರು ಕಾರ್ಯದರ್ಶಿ ಕಿರಣ್ ಎಂ .ಆರ್ . ವಿದ್ಯಾರ್ಥಿ ಮುಖಂಡರಾದ ಅಭಿಲಾಷ್, ಶಾಂತಕುಮಾರ್, ಆಕಾಶ,ಆನಂದ್ ಕೆ.ಎಲ್. ರಾಜ್.ಎನ್.ಎಸ್. ದುರ್ಗಾ ದರ್ಶನ,ಮೋಹನ್ ಕುಮಾರ್ ಹಾಗೂ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ