ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರದ ವಿಮೋಚನೆಗೆ ಹುಳಿಯಾರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ.
ಕ್ಷೇತ್ರ ಧರ್ಮಸ್ಥಳಕ್ಕೆ ಮಸಿ ಹಚ್ಚುವ ಕೆಲಸ ನಡೆಯುತ್ತಿರುವ ಬಗ್ಗೆ ಭಕ್ತರಿಂದ ಖಂಡನೆ --------------------------------------- ಹುಳಿಯಾರು : ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಸುತ್ತಿರುವ ಅಪಪ್ರಚಾರ ನಿಲ್ಲಿಸುವಂತೆ ಕೋರಿ ಹುಳಿಯಾರು ಭಾಗದ ಭಕ್ತಾದಿಗಳಿಂದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ಜರುಗಿತು. ಸಮಸ್ತ ಭಕ್ತಾದಿಗಳ ಪರವಾಗಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್ , ಸಮಸ್ತ ಹಿಂದೂಗಳ ಆರಾಧ್ಯ ದೈವ ಮಂಜುನಾಥೇಶ್ವರ ನೆಲಸಿರುವ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರ ಕುರಿತು ಇತ್ತೀಚೆಗೆ ಕೆಲವರು ಆಧಾರರಹಿತವಾಗಿ ಅಪಪ್ರಚಾರ ನಡೆಸುತ್ತಿದ್ದು, ಈ ಮೂಲಕ ಶ್ರೀಗಳ ವ್ಯಕ್ತಿತ್ವಕ್ಕೆ ಹಾಗೂ ಚಾರಿತ್ರಕ್ಕೆ ಕಳಂಕ ತರವ ಕೆಲಸ ಮಾಡುತ್ತಿದ್ದಾರೆ. ಸತತ ಅಪಪ್ರಚಾರ ಹಾಗೂ ವಿನಾಕಾರಣ ದೂಷಣೆಯಿಂದಾಗಿ ಶ್ರೀ ಕ್ಷೇತ್ರಕ್ಕೆ ಮಸಿ ಹಚ್ಚುವ ಕೆಲಸ ನಡೆಯುತ್ತಿದ್ದು ಇದು ಧರ್ಮಸ್ಥಳ ಶ್ರೀ ಕ್ಷೇತ್ರದ ಅಪಾರ ಭಕ್ತಾಧಿಗಳಿಗೆ ನೋವುಂಟು ಮಾಡಿದೆ. ಇದನ್ನು ತಾವು ಖಂಡಿಸುವುದಾಗಿ ತಿಳಿಸಿದರು. ಪೂಜ್ಯರು ಮಾಡಿರುವ ಸಮಾಜ ಸೇವಾ ಕೈಂಕರ್ಯ, ಹಾಗೂ ಸಾಧ...