ಹುಳಿಯಾರು ಸಮೀಪದ ಯಳನಡುವಿನ ಗ್ರಾಮ ಪಂಚಾಯಿತಿ ಆವರಣದಲ್ಲಿ ಯಳನಡುವಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಹುಳಿಯಾರಿನ ಕೆನರಾ ಬ್ಯಾಂಕ್ ಜಂಟಿಯಾಗಿ ಏರ್ಪಡಿಸಿದ್ದ ವಿಕಸಿತ್ ಭಾರತ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬ್ಯಾಂಕಿನ ಎಲ್ಲಾ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಡಿಜಿಟಲ್ ಬ್ಯಾಂಕಿಂಗ್ ನಿಂದ ಮಾತ್ರ ಸಾಧ್ಯವಾಗಲಿದ್ದು ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ತಿಳಿಸಿದರು
ಈ ಸಮಾರಂಭದಲ್ಲಿ ಉಪಸ್ಥಿತರಿದ್ದ ಹುಳಿಯರಿನ ಕೆನರಾ ಬ್ಯಾಂಕ್ ಮ್ಯಾನೇಜರ್ ವಿನಯ್ ಟಿ.ಸಿ ,ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾದ ರಕ್ಷಿತ್ ಕುಮಾರ್ ,ಆರ್ಥಿಕ ಸಾಕ್ಷರ ಸಲಹೆಗಾರ ಆರ್. ಎಂ.ಕುಮಾರಸ್ವಾಮಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಹರ್ಷ ,ಗ್ರಾಮ ಪಂಚಾಯಿತಿ ಸದಸ್ಯರಾದ ಶಶಿಧರ್ ,ರೈತ ಉತ್ಪನ್ನ ಕಂಪನಿಯ ಅಧ್ಯಕ್ಷರಾದ ಪರಮೇಶ್, ಸಮಾಜಸೇವಕ ಉಮೇಶ್ ಮುಂತಾದವರು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ವಿವರಣೆ ನೀಡಿ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಕಾರ್ಯಗಾರದಲ್ಲಿ ಡ್ರೋನ್ ಪ್ರಾತ್ಯಕ್ಷಿ ಕತೆ, ಫಲಾನುಭವಿಗಳ ಯಶೋಗಾಥೆ ಹಾಗೂ 2047ರ ಹೊತ್ತಿಗೆ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವ ಪ್ರಮಾಣವಚನ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು,ಸ್ವಸಹಾಯ ಸಂಘದ ಸದಸ್ಯರುಗಳು,ವ್ಯಾಪಾರಸ್ಥರು, ಕೈಗಾರಿಕೋದ್ಯಮಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ