ಕಾರ್ಯಗಾರವನ್ನು ಉದ್ಘಾಟಿಸಿದ ಹುಳಿಯಾರು ಭಾರತೀಯ ಸ್ಟೇಟ್ ಬ್ಯಾಂಕ್ ನ ವ್ಯವಸ್ಥಾಪಕರಾದ ಸತೀಶ್.ಕೆ. ಸಿಂಗ್ ಮಾತನಾಡಿ ನಮ್ಮ ಬ್ಯಾಂಕು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಅಳವಡಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕರೆ ನೀಡಿದರು
ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ಸಂಯೋಜಕರಾದ ರಮೇಶ್ ಮಾತನಾಡಿ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ ಹಾಗೂ ಜೀವನ ಜ್ಯೋತಿ ವಿಮಾ ಯೋಜನೆಯನ್ನು ಬ್ಯಾಂಕುಗಳ ಮುಖಾಂತರ ನೋಂದಾಯಿಸಿ ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಆರ್.ಎಂ.ಕುಮಾರಸ್ವಾಮಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಹೆಚ್ಚಾಗುತ್ತಿದ್ದು ಜನರು ತಮ್ಮ ಖಾತೆಗಳಲ್ಲಿನ ಹಣವನ್ನು ಕಳೆದುಕೊಳ್ಳುತ್ತಿರುವುದು ವಿಷಾದನೀಯ.ಇದರ ಬಗ್ಗೆ ಜನರು ಎಚ್ಚರದಿಂದಿರಬೇಕೆಂದು ಕರೆ ನೀಡಿದರು
ಈ ಕಾರ್ಯಗಾರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶೇಷಗಿರಿ ಉಪಸ್ಥಿತರಿದ್ದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಕಸಿತ್ ಭಾರತ ಯೋಜನೆಯ ರಥ ಹಾಜರಿದ್ದು ಕೇಂದ್ರ ಸರ್ಕಾರದ ಯೋಜನೆಗಳನ್ನು ಬಿತ್ತರಿಸಿದರೆ, ಸರಳವಾಗಿ ಕಡಿಮೆ ಸಮಯದಲ್ಲಿ ಔಷಧಿ ಹಾಗೂ ಗೊಬ್ಬರವನ್ನು ಸಿಂಪಡಿಸುವ ಡ್ರೋನ್ ಪ್ರಾತ್ಯಕ್ಷಿಕೆಯನ್ನು ಉಮೇಶ್ ನಡೆಸಿಕೊಟ್ಟರು.
ಸ್ವಸಹಾಯ ಸಂಘದ ಎನ್ ಜಿ ಓ ಲಿಂಗರಾಜ್ ಹಾಗೂ ವಿಕಾಸ್ ಉಪಸ್ಥಿತರಿದ್ದರು.ಈ ಕಾರ್ಯಗಾರದಲ್ಲಿ ಹೆಚ್ಚಿನ ಸಂಖ್ಯೆಯ ಸಂಘದ ಸದಸ್ಯರು ರೈತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ