ವಿಷಯಕ್ಕೆ ಹೋಗಿ

ಹೆಚ್.ಮೇಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ಫೆ.11ರ ಭಾನುವಾರ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳ ಸಮಾಗಮ

ಹುಳಿಯಾರು ಹೋಬಳಿಯ ಹೆಚ್.ಮೇಲನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಅಮೃತ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಫೆ.11ರ ಭಾನುವಾರ ಮೇಲನಹಳ್ಳಿಯ ಶಾಲಾ ಆವರಣದಲ್ಲಿ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳ ಸಮಾಗಮ ನಡೆಯಲಿದೆ.

ಅಮೃತ ಮಹೋತ್ಸವದ ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಿ ಸಂಜೆಯವರೆಗೂ ನಡೆಯಲಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಗಣ್ಯರ ಪಟ್ಟಿ ಹೀಗಿದೆ.

*ಗುರುವಂದನಾ ಕಾರ್ಯಕ್ರಮ*

ಬೆ.10: 00ಗಂಟೆಗೆ ಗುರುವಂದನಾ ಕಾರ್ಯಕ್ರಮವನ್ನು ಸಾಹಿತಿಗಳಾದ ಕೃಷ್ಣಮೂರ್ತಿ ಬಿಳಿಗೆರೆ ಉದ್ಘಾಟಿಸಲಿದ್ದಾರೆ.

ಎಂ.ಕೆ. ಪ್ರಹ್ಲಾದ್- ಅಧ್ಯಕ್ಷರು- ಶಾಲಾಭಿವೃದ್ಧಿ ಸಮಿತಿ, ಸ.ಹಿ.ಪ್ರಾ ಶಾಲೆ, ಹೆಚ್.ಮೇಲನಹಳ್ಳಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

ಗಾಣಧಾಳು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಟಿ.ಗಿರೀಶ್, ಮಾಜಿ ಗ್ರಾ.ಪಂ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀಮತಿ ಭಾಗ್ಯಮ್ಮ,  ಎಂ.ಹೆಚ್.ವೀರಭದ್ರಯ್ಯ-ಗ್ರಾ.ಪಂ ಸದಸ್ಯರು- ಹೆಚ್.ಮೇಲನಹಳ್ಳಿ, ಎಂ.ಕೆ.ಮಂಜುಳ- ಗ್ರಾ.ಪಂ ಸದಸ್ಯರು-ಹೆಚ್.ಮೇಲನಹಳ್ಳಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

-----------------------------

ಬೆಳಗ್ಗೆ 12 ರಿಂದ 1.30 ಹಿರಿಯ ನಾಗರೀಕರಿಗೆ - ನಿವೃತ್ತ ಹಳೆ ವಿದ್ಯಾರ್ಥಿ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಉದ್ಘಾಟನೆ : ಡಾ.ವೇಣುಗೋಪಾಲ್‌ ತಿಮ್ಮನಹಳ್ಳಿ , ಲೇಖಕರು.

ಅಧ್ಯಕ್ಷತೆ : ಶ್ರೀ ಕೆ.ರಂಗಯ್ಯ- ಗುರುವಾಪುರ, ಹಿರಿಯ ಪ್ರಾಥಮಿಕ ಪಾಠಶಾಲೆಯ ಪ್ರಥಮ ವರ್ಷದ ವಿದ್ಯಾರ್ಥಿ

ಉಪಸ್ಥಿತಿ : ಶ್ರೀ ರಾಮಕೃಷ್ಣಪ್ಪ ಯಗಚೀಹಳ್ಳಿ-ಪರಿಸರ ಚಿಂತಕರು, 

ಶ್ರೀ ಕೆ.ಎನ್.ರಮೇಶ್-ಮುಖ್ಯ ಶಿಕ್ಷಕರು, ಸlಹಿ।ಪ್ರಾ|ಪಾಠಶಾಲೆ, ಹೆಚ್.ಮೇಲನಹಳ್ಳಿ

--------------------------

ಮಧ್ಯಾಹ್ನ 2.30 ರಿಂದ 5.00 *ಅಮೃತ ಮಹೋತ್ಸವದ ಉದ್ಘಾಟನೆ*

ಉದ್ಘಾಟನೆ : ಡಾ. ಜಿ.ಪರಮೇಶ್ವ‌ರವರು-ಮಾನ್ಯ ಗೃಹ ಸಚಿವರು, ಕರ್ನಾಟಕ ಸರ್ಕಾರ

ಸ್ಮರಣ ಸಂಚಿಕೆ ಬಿಡುಗಡೆ : ಶ್ರೀ ಮಧು ಬಂಗಾರಪ್ಪನವರು-ಮಾನ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರು, ಕರ್ನಾಟಕ ಸರ್ಕಾರ

ಶಾಲಾ ನಾಮಫಲಕ ಅನಾವರಣ : ಶ್ರೀ ಕೆ.ಎನ್.ರಾಜಣ್ಣನವರು-ಮಾನ್ಯ ಸಹಕಾರ ಸಚಿವರು, ಕರ್ನಾಟಕ ಸರ್ಕಾರ

ಕಂಪ್ಯೂಟರ್ ಕೊಠಡಿ ಉದ್ಘಾಟನೆ : ಶ್ರೀ ಟಿ.ಬಿ.ಜಯಚಂದ್ರರವರು- ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ, ಕರ್ನಾಟಕ ಸರ್ಕಾರ

ಅಧ್ಯಕ್ಷತೆ : ಶ್ರೀ ಸಿ.ಬಿ.ಸುರೇಶ್‌ ಬಾಬು ಮಾನ್ಯ ಶಾಸಕರು, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ

ಮುಖ್ಯ ಅತಿಥಿಗಳು :

ಶ್ರೀ ಜಿ.ಎಸ್.ಬಸವರಾಜು, ಮಾನ್ಯ ಸಂಸದರು, ತುಮಕೂರು 

ಶ್ರೀ ವೈ.ಎ.ನಾರಾಯಣಸ್ವಾಮಿ, ಮಾನ್ಯ ವಿಧಾನಪರಿಷತ್ ಸದಸ್ಯರು 

ಶ್ರೀ ಆರ್.ರಾಜೇಂದ್ರ, ಮಾನ್ಯ ವಿಧಾನಪರಿಷತ್ ಸದಸ್ಯರು 

ಶ್ರೀ ಎಂ.ಚಿದಾನಂದ ಗೌಡ, ಮಾನ್ಯ ವಿಧಾನಪರಿಷತ್‌ ಸದಸ್ಯರು 

ಶ್ರೀ ಜೆ.ಸಿ.ಮಾಧುಸ್ವಾಮಿ, ಮಾಜಿ ಸಚಿವರು 

ಶ್ರೀ ಕೆ.ಎಸ್.ಕಿರಣ್‌ ಕುಮಾರ್, ಮಾಜಿ ಶಾಸಕರು


ವಿಶೇಷ ಆಹ್ವಾನಿತರು :

-------------------------

ಶ್ರೀಮತಿ ಶುಭಕಲ್ಯಾಣ್, ಜಿಲ್ಲಾಧಿಕಾರಿಗಳು 

ಶ್ರೀ ಕೆ.ವಿ.ಅಶೋಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು 

ಶ್ರೀ ಪ್ರಭು ಜಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ತುಮಕೂರು 

ಶ್ರೀ ರಂಗಧಾಮಯ್ಯ.ಸಿ. ಉಪನಿರ್ದೇಶಕರು, ತುಮಕೂರು ಶೈಕ್ಷಣಿಕ ಜಿಲ್ಲೆ

ಆಹ್ವಾನಿತರು :

----------------

ಶ್ರೀಮತಿ ಸಿ.ಜಿ.ಗೀತಾ, ತಹಶೀಲ್ದಾರ್, ಚಿಕ್ಕನಾಯಕನಹಳ್ಳಿ 

ಶ್ರೀ ಹೆಚ್.ಕೆ.ವಸಂತಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಚಿಕ್ಕನಾಯಕನಹಳ್ಳಿ 

ಶ್ರೀ ಸಿ.ಎಸ್.ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿಕ್ಕನಾಯಕನಹಳ್ಳಿ

------------------------------------------

ಸಂಜೆ 6 ರಿಂದ ಹಳೆ ವಿದ್ಯಾರ್ಥಿಗಳ ಸಮಾಗಮ- ಶಾಲಾ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...