ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು.
ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು.
ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.
ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ