ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹುಳಿಯಾರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಚರಣೆ

ಹುಳಿಯಾರಿನ ಬಿಹೆಚ್ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಲ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಹಾಗೂ ಗಿಡ ನೆಡುವ ಮೂಲಕ 132ನೇ ಜಯಂತಿಯನ್ನು ಆಚರಿಸಲಾಯಿತು. ಉಪನ್ಯಾಸಕ ನರೇಂದ್ರಬಾಬು ಮಾತನಾಡಿ ಶೋಷಿತರ ಏಳಿಗೆಗಾಗಿ ಹೋರಾಡಿದ, ಸಮಾನತೆಯ ಮಾರ್ಗ ತೋರಿದ, ಹೋರಾಟದ ಮುಖಾಂತರ ಶೋಷಿತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸಿದ ಅಂಬೇಡ್ಕರ್ ಅವರ ಆದರ್ಶ ಎಲ್ಲರೂ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಎಬಿವಿಪಿ ಸಂಚಾಲಕ ಗುರುಪ್ರಸಾದ್ ಮಾತನಾಡಿ ಅಂಬೇಡ್ಕರ್ ಜನ್ಮದಿನವನ್ನು ವಿಶ್ವ ಜ್ಞಾನ ದಿನ ಎಂದು ಆಚರಿಸಲಾಗುತ್ತಿದ್ದು ಪ್ರತಿಯೊಬ್ಬ ಭಾರತೀಯರ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದು, ಅವರ ವಿಚಾರಧಾರೆಗಳು ಇಂದಿಗೂ ಎಂದಿಗೂ ಪ್ರಸ್ತುತ ಎಂದರು. ಹೆಚ್‍.ಡಿ.ರಾಮಚಂದ್ರಯ್ಯನವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೂರಾನಿ  ಮಸೀದಿಯ ಮುತುವಲ್ಲಿ  ಆರಿಫ್‌ರವರು, ಕಾಲೋನಿ ಮುಖ್ಯಸ್ಥರಾದಂತಹ ಹೆಚ್.ಎನ್.ದುರ್ಗಯ್ಯನವರು, ಹೆಚ್.ಬಿ.ಕೃಷ್ಣಯ್ಯನವರು, ಪ್ಲೇನಿಂಗ್ ಮಿಲ್ ನಾಗಣ್ಣನವರು, ಶಿಕ್ಷಕ ಹಾಗಲವಾಡಿ ಚಿಕ್ಕಣ್ಣನವರು, ಡಿಎಸ್ಎಸ್ ಸಂಚಾಲಕ ರಾಘವೇಂದ್ರ, ಇಮ್ರಾಜ್ , ಹಾರ್ಡ್ವೇರ್ ಬಸವರಾಜು ಮೊದಲಾದವರು ಹಾಜರಿದ್ದರು.

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್